HomeKarnatakaBIG NEWS: ಮಹಿಳೆಯರ ಸುರಕ್ಷತೆಗೆ ಸಂಪುಟ ಸಭೆ ಮಹತ್ವದ ನಿರ್ಣಯ: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕ ಪಡೆ...

BIG NEWS: ಮಹಿಳೆಯರ ಸುರಕ್ಷತೆಗೆ ಸಂಪುಟ ಸಭೆ ಮಹತ್ವದ ನಿರ್ಣಯ: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕ ಪಡೆ ವಿಸ್ತರಣೆ

ಬೆಂಗಳೂರು: ದೌರ್ಜನ್ಯ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ನೆರವು ಮತ್ತು ರಕ್ಷಣೆ ಒದಗಿಸಿ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ಕ ಪಡೆಯನ್ನು ರಾಜ್ಯದ 30 ಜಿಲ್ಲೆ ಮತ್ತು 5 ಪೊಲೀಸ್‌ ಆಯುಕ್ತಾಲಯಗಳಲ್ಲಿ ಸ್ಥಾಪಿಸಿ, ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಅರಿವು, ತಕ್ಷಣದ ರಕ್ಷಣೆ ಮತ್ತು ಅಗತ್ಯ ನೆರವು ನೀಡಲು ಉದ್ದೇಶಿಸಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಬಾಲ್ಯ ವಿವಾಹದ ಪ್ರಕರಣಗಳ ತಡೆ, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆದು ರಕ್ಷಣೆ ನೀಡುವ ದೃಷ್ಟಿಯಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಕ್ಕಪಡೆಯನ್ನು ಪ್ರಾಯೋಗಿಕವಾಗಿ ರಚಿಸಿ ಕಾರ್ಯನಿರ್ವಹಿಸುತ್ತಿದ್ದು, ಉದ್ದೇಶಿತ ಕಾರ್ಯಗಳಲ್ಲಿ ಯಶಸ್ವಿಯಾಗಿರುವುದರಿಂದ ರಾಜ್ಯಾದ್ಯಂತ ಅಕ್ಕಪಡೆಯನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular