BIG NEWS : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ʻಸಂಪುಟ ಉಪಸಮಿತಿ ರಚನೆʼಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ  7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ. ಎಂದರು.

ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದಾರೆ.

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.

ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ. ಮಾಧ್ಯಮದವರು, ಸುದ್ದಿ ವಾಹಿನಿಯವರು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read