BIG NEWS : ಅನರ್ಹ ‘BPL ಕಾರ್ಡ್’ ರದ್ದು ಮಾಡಿ ; ರಾಜ್ಯ ಸರ್ಕಾರ ಖಡಕ್ ಆದೇಶ..!

ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, ಯಾರು ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅಂತವರನ್ನು ಪತ್ತೆ ಹಚ್ಚಿ ಕಾರ್ಡ್ ರದ್ದು ಮಾಡುವಂತೆ ಅಧಿಕಾರಿಗಳಿಗೆ ಸರ್ಕಾರ ಆದೇಶ ನೀಡಿದೆ.

ಹೌದು, ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read