HomeLatest NewsBIG NEWS: ಫೆ. 10 ರೊಳಗೆ ಜಾತಿಗಣತಿ ವರದಿ ಸಲ್ಲಿಕೆ

BIG NEWS: ಫೆ. 10 ರೊಳಗೆ ಜಾತಿಗಣತಿ ವರದಿ ಸಲ್ಲಿಕೆ

ಬೆಂಗಳೂರು: ಜನವರಿ ಅಂತ್ಯದೊಳಗೆ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಫೆಬ್ರವರಿ 10ರೊಳಗೆ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ. ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರ ನೇತೃತ್ವದಲ್ಲಿ ಈಗಾಗಲೇ ಅಂಕಿ ಅಂಶಗಳ ಕ್ರೋಡೀಕರಣ ನಡೆಯುತ್ತಿದೆ. ಜನವರಿ ಅಂತ್ಯದೊಳಗೆ ಅಂತಿಮಗೊಳಿಸಿ ಫೆಬ್ರವರಿಯಲ್ಲಿ ವರದಿ ಸಲ್ಲಿಸಬಹುದು ಎಂದರು.

ವರದಿ ಬಿಡುಗಡೆಯಾದರೆ ಪ್ರತಿಯೊಂದು ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ನಿಖರ ಮಾಹಿತಿ ಸಿಗಲಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಗುರುತಿಸಿ ಸರ್ಕಾರದ ಯೋಜನೆ ತಲುಪಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular