ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭಗವಾನ್ ಬುದ್ದ ಜಯಂತಿ ಆಚರಿಸುವಂತೆ ಸರ್ಕಾರದ ಮಹತ್ವದ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ಮೇಲೆ ಓದಲಾದ ಏಕಕಡತದಲ್ಲಿ, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು ರಾಷ್ಟ್ರಗಳು ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಿಸುತ್ತಿದ್ದು, ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ತಿಳಿಸುತ್ತಾ, ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಸರ್ಕಾರದ ವತಿಯಿಂದ ಪ್ರತಿವರ್ಷ ಆಯೋಜಿಸಿ ಆಚರಿಸಲು ಸರ್ಕಾರದ ಆದೇಶ ಹೊರಡಿಸುವಂತೆ ಕೋರಿರುತ್ತಾರೆ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಈಗಾಗಲೇ ವಾರ್ಷಿಕವಾಗಿ ವಿವಿಧ ಮಹಾಪುರುಷರ 32 ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಭಗವಾನ್ ಬುದ್ಧರ ಜಯಂತಿಯನ್ನು ಇಲಾಖಾ ವತಿಯಿಂದ ಆಚರಿಸುವ ಬಗ್ಗೆ ಸರ್ಕಾರದ ಮಾರ್ಗದರ್ಶನ ನೀಡುವಂತೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಕೋರಿರುತ್ತಾರೆ.
ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದ.ಸರ್ಕಾರದ ಆದೇಶ ಸಂಖ್ಯೆ: ಕಸಂವಾ 114 ಕಸದ 2022 (ಭಾ-3) ಬೆಂಗಳೂರು, ದಿನಾಂಕ:08.04.2025.ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಭಗವಾನ್ ಬುದ್ಧರ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿದೆ. ಸದರಿ ಜಯಂತಿಯ ಆಚರಣೆಗೆ ತಗಲುವ ವೆಚ್ಚವನ್ನು ಮಹಾಪುರುಷರ ಜಯಂತಿಗಳ ಆಚರಣೆಗೆ 2025-263 ಅನುದಾನದಿಂದ ಭರಿಸತಕ್ಕದ್ದು ಎಂದು ಆದೇಶಿಸಲಾಗಿದೆ.

