HomeLatest NewsBIG NEWS: ರಾಜ್ಯದ ರೈತರಿಗೆ ಗುಡ್ ನ್ಯೂಸ್: 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ...

BIG NEWS: ರಾಜ್ಯದ ರೈತರಿಗೆ ಗುಡ್ ನ್ಯೂಸ್: 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ

ನವದೆಹಲಿ: ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಗೆ ಕೇಂದ್ರ ಕೃಷಿ ಇಲಾಖೆ ಸಮ್ಮತಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ನಾಫೆಡ್, ಎನ್‌ಸಿಸಿಎಫ್ ಮೂಲಕ 90 ದಿನದೊಳಗೆ ತೊಗರಿ ಖರೀದಿಸಲು ಅನುಮತಿ ನೀಡಲಾಗಿದೆ.

ಕರ್ನಾಟಕದಲ್ಲಿ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಕೂಡಲೇ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಮುಂದಾಗುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪತ್ರ ಬರೆದು ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೃಷಿ ಸಚಿವರು ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ತೊಗರಿ ಬೆಳೆ ಖರೀದಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ್ದಾರೆ. 2025-26ನೇ ಸಾಲಿಗೆ ತೊಗರಿಗೆ ಎಂಎಸ್ಪಿ ಕ್ವಿಂಟಲ್ ಗೆ 8000 ರೂ. ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular