ಬೆಂಗಳೂರು: ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪೌರಾಡಳಿತ ಸಚಿವ ರಹೀಂ ಖಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಸನದಲ್ಲಿ ಕೃಷ್ಣ ಬೈರೇಗೌಡ, ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಜಮೀರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿತ್ತು. ಈಗ ರಹೀಂ ಖಾನ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಹಾಸನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಎಂದು ಸಚಿವ ಕೃಷ್ಣಭೈರೇಗೌಡ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎನ್. ರಾಜಣ್ಣ, ನನಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಬೇಡವೆಂದು ಹೇಳಿದ್ದೆ. ಮೂರು ತಿಂಗಳ ಹಿಂದೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ಹೇಳಿದ್ದೇನೆ. ಅದಕ್ಕೆ ಕೃಷ್ಣ ಬೈರೇಗೌಡ ಅವರಿಗೆ ಸಿಎಂ ಧ್ವಜಾರೋಹಣ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.
