HomeLatest NewsBIG NEWS: 2 ಜಿಲ್ಲೆ ಉಸ್ತುವಾರಿ ಸಚಿವರ ಬದಲಾವಣೆ: ಹಾಸನದಲ್ಲಿ ಕೃಷ್ಣ ಬೈರೇಗೌಡ, ಬಳ್ಳಾರಿಯಲ್ಲಿ ರಹೀಂ...

BIG NEWS: 2 ಜಿಲ್ಲೆ ಉಸ್ತುವಾರಿ ಸಚಿವರ ಬದಲಾವಣೆ: ಹಾಸನದಲ್ಲಿ ಕೃಷ್ಣ ಬೈರೇಗೌಡ, ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ

ಬೆಂಗಳೂರು: ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪೌರಾಡಳಿತ ಸಚಿವ ರಹೀಂ ಖಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಸನದಲ್ಲಿ ಕೃಷ್ಣ ಬೈರೇಗೌಡ, ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಜಮೀರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿತ್ತು. ಈಗ ರಹೀಂ ಖಾನ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಎಂದು ಸಚಿವ ಕೃಷ್ಣಭೈರೇಗೌಡ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎನ್. ರಾಜಣ್ಣ, ನನಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಬೇಡವೆಂದು ಹೇಳಿದ್ದೆ. ಮೂರು ತಿಂಗಳ ಹಿಂದೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ಹೇಳಿದ್ದೇನೆ. ಅದಕ್ಕೆ ಕೃಷ್ಣ ಬೈರೇಗೌಡ ಅವರಿಗೆ ಸಿಎಂ ಧ್ವಜಾರೋಹಣ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular