HomeLatest NewsBIG NEWS: ಪಾಸ್ ಪೋರ್ಟ್ ಅರ್ಜಿಯಲ್ಲಿ ಮಗುವಿನ ಸುಪರ್ದಿ ಮಾಹಿತಿ ಘೋಷಿಸಬೇಕು: ಹೈಕೋರ್ಟ್ ಆದೇಶ

BIG NEWS: ಪಾಸ್ ಪೋರ್ಟ್ ಅರ್ಜಿಯಲ್ಲಿ ಮಗುವಿನ ಸುಪರ್ದಿ ಮಾಹಿತಿ ಘೋಷಿಸಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಕೌಟುಂಬಿಕ ವ್ಯಾಜ್ಯವಿರುವ ಪತಿ-ಪತ್ನಿಯ ಬಗ್ಗೆ ಯಾರಾದರೂ ಒಬ್ಬರು ಅಪ್ರಾಪ್ತ ಮಗುವಿಗೆ ಪಾಸ್ಪೋರ್ಟ್ ನೀಡುವಂತೆ ಅರ್ಜಿ ಸಲ್ಲಿಸುವಾಗ ಮಗುವಿನ ಸುಪರ್ದಿ ಬಗ್ಗೆ ವಾಸ್ತವ ಅಂಶಗಳನ್ನು ಸರಿಯಾಗಿ ಘೋಷಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ತಮಗೆ ಹೊಸ ಪಾಸ್ಪೋರ್ಟ್ ನೀಡುವಂತೆ ಮತ್ತು ಅಸ್ತಿತ್ವದಲ್ಲಿರುವ ಪಾಸ್ಪೋರ್ಟ್ ನವೀಕರಣಕ್ಕೆ ನಿರ್ದೇಶನ ನೀಡುವಂತೆ ಕೋರಿ ಇಬ್ಬರು ಅಪ್ರಾಪ್ತ ಮಕ್ಕಳು ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಪತಿ-ಪತ್ನಿಯಲ್ಲಿ ಯಾರಾದರೂ ಒಬ್ಬರು ಅಪ್ರಾಪ್ತ ಮಗುವಿಗೆ ಪಾಸ್ಪೋರ್ಟ್ ನೀಡುವಂತೆ ಅರ್ಜಿ ಸಲ್ಲಿಸಿದಾಗ ಮಗುವಿನ ಸುಪರ್ದಿ ಬಗ್ಗೆ ಸುಳ್ಳು ಘೋಷಣೆ ಮಾಡಿದರೆ ಅದನ್ನು ಮಾನ್ಯ ಮಾಡಲಾಗುವುದಿಲ್ಲ. ಹೀಗಾಗಿ ಪೋಷಕರು ಪಾಸ್ಪೋರ್ಟ್ ನಲ್ಲಿ ವಾಸ್ತವ ಅಂಶಗಳನ್ನು ಸರಿಯಾಗಿ ಘೋಷಿಸಬೇಕು. ಒಂದು ವೇಳೆ ಡೈವೋರ್ಸ್ ಆಗಿದ್ದರೆ ಮಗುವಿನ ಸುಪರ್ದಿಯ ಬಗ್ಗೆ ಆದೇಶಗಳು ಇದ್ದರೆ ಆ ದಾಖಲೆಗಳನ್ನು ಪಾಸ್ಪೋರ್ಟ್ ವಿತರಣೆ ನವೀಕರಣಕ್ಕೆ ಕೋರಿದ ಅರ್ಜಿಯೊಂದಿಗೆ ಲಗತ್ತಿಸಬೇಕು ಎಂದು ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular