HomeKarnatakaBIG NEWS : ಬೆಳಗಾವಿಯಲ್ಲಿ ‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕ ಬಿಡುಗಡೆ ಮಾಡಿದ ಸಿಎಂ...

BIG NEWS : ಬೆಳಗಾವಿಯಲ್ಲಿ ‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕ ಬಿಡುಗಡೆ ಮಾಡಿದ ಸಿಎಂ , ಖರ್ಗೆ

ಬೆಳಗಾವಿ : 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಗಾಂಧಿ ಭಾರತ ಮರು ನಿರ್ಮಾಣ” ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.

1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು, ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ, ಅಕಾಲಿಗಳಿಗೆ ಅಭಿನಂದನೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು, ಅಸ್ಪೃಶ್ಯತೆ ನಿವಾರಣೆ, ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ಸಿಂಗ್ ಸುರ್ಜೇವಾಲಾ, ವಿಧಾನಸಭೆ ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಕೆ.ಪಾಟೀಲ, ಡಾ.ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular