HomeKarnatakaBIG NEWS : ಜೈನ ಮುನಿಗಳ ಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಸಿಎಂ ಸೂಚನೆ

BIG NEWS : ಜೈನ ಮುನಿಗಳ ಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಸಿಎಂ ಸೂಚನೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೈನ ಮುನಿಗಳ ಹತ್ಯೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಕಾನೂನು ಬಾಹಿರ ಕೃತ್ಯವೆಸಗಿದ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular