HomeKarnatakaBIG NEWS : ʻಭೂ ಸುಧಾರಣಾ ಕಾಯ್ದೆʼಗೆ ತಿದ್ದುಪಡಿ : CM ಸಿದ್ದರಾಮಯ್ಯ ಘೋಷಣೆ

BIG NEWS : ʻಭೂ ಸುಧಾರಣಾ ಕಾಯ್ದೆʼಗೆ ತಿದ್ದುಪಡಿ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಶವನ್ನು ಉದ್ಘಾಟಿಸಿ, ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಾರ್ಗದರ್ಶನ ನನಗೆ ಅನುಕೂಲವಾಯಿತು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಅವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು.  ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟಗಳು ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular