HomeKarnatakaBIG NEWS : ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ.!

BIG NEWS : ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಪ್ರಖ್ಯಾತ ಪತ್ರಕರ್ತ, ಪ್ರಖರ ಚಿಂತಕ ಮತ್ತು ಹೋರಾಟಗಾರ ವಿ.ಟಿ.ರಾಜಶೇಖರ್ (93) ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಪತ್ರಿಕಾ ವೃತ್ತಿಯನ್ನು ಒಬ್ಬ ಹೋರಾಟಗಾರನಾಗಿಯೇ ಮುನ್ನಡೆಸಿದ್ದ ರಾಜಶೇಖರ್, ಜಾತಿ ವ್ಯವಸ್ಥೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಸದಾ ಸಿಡಿಯುತ್ತಿದ್ದವರು. ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ನಂತರ ಅಲ್ಲಿಂದ ಹೊರಬಂದು 1981ರಲ್ಲಿ ದಲಿತ್ ವಾಯ್ಸ್ ಪತ್ರಿಕೆಯನ್ನು ಪ್ರಾರಂಭಿಸಿದ್ದರು.

ಆ ದಿನಗಳಿಂದಲೇ ಪರಿಚಿತರಾಗಿದ್ದ ರಾಜಶೇಖರ್ ಅವರು ಒಬ್ಬ ಹಿರಿಯ ಹಿತೈಷಿಯಾಗಿ ನನಗೆ ಮಾರ್ಗದರ್ಶನ ನೀಡುತ್ತಿದ್ದವರು. ರಾಜಶೇಖರ್ ಅವರ ಸಾವು ಸಮಾಜಕ್ಕೆ ದೊಡ್ಡ ನಷ್ಟ ಮಾತ್ರವಲ್ಲ, ಅವರಂತಹ ಜನಪರ ಚಿಂತಕರ ನಿಧನದಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕೂಡಾ ಕಷ್ಟ. ತಂದೆಯನ್ನು ಕಳೆದುಕೊಂಡ ಅಮ್ನೆಷ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ, ಮಗ ಸಲೀಲ್ ಶೆಟ್ಟಿ, ಕುಟುಂಬ ವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular