HomeKarnatakaBIG NEWS : 'NEET' ಮರು ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹ |NEET RE-Exam

BIG NEWS : ‘NEET’ ಮರು ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹ |NEET RE-Exam

ಮೈಸೂರು : ನೀಟ್ ಮರು ( NEET Re-Exam )  ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡಿರುವುದು ಸರಿಯಲ್ಲ. ಮರು ಪರೀಕ್ಷೆ ನಡೆಸುವ ಮೂಲಕ ಅರ್ಹ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ದರ್ಶನ್ ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ..!

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ. ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕಿರುವ ನಿರ್ಧಾರದ ಹಿಂದಿನ ಉದ್ದೇಶ ನನಗೂ ತಿಳಿದಿಲ್ಲ. ಪೊಲೀಸರು ನನಗೆ ಮಾಹಿತಿ ನೀಡಿ ತೀರ್ಮಾನ ಮಾಡಿಲ್ಲ. ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಸಾಮಾನ್ಯ ಜನ ಹೇಗೆ ಹೇಳುತ್ತಾರೊ ಹಾಗೆ ಕೇಳುತ್ತೇವೆ ಎಂದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular