HomeKarnatakaBIG NEWS : ಮಾ.22 ರ ಕರ್ನಾಟಕ ಬಂದ್ ಗೆ 'ಸಿಎಂ ಸಿದ್ದರಾಮಯ್ಯ' ವಿರೋಧವಿಲ್ಲ :...

BIG NEWS : ಮಾ.22 ರ ಕರ್ನಾಟಕ ಬಂದ್ ಗೆ ‘ಸಿಎಂ ಸಿದ್ದರಾಮಯ್ಯ’ ವಿರೋಧವಿಲ್ಲ : ವಾಟಾಳ್ ನಾಗರಾಜ್

ಬೆಂಗಳೂರು : ಕರ್ನಾಟಕ ಬಂದ್ ಗೆ ಸಿಎಂ ಸಿದ್ದರಾಮಯ್ಯ ವಿರೋಧವಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬಂದ್ ಕುರಿತಾದ ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ಬಂದ್ ಕುರಿತು ಮಾತನಾಡಲು ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋದಾಗ ಅವರು ಬಂದ್ ಗೆ ನಮ್ಮ ವಿರೋಧವಿಲ್ಲ ಎಂದು ಹೇಳಿದ್ದರು ಎಂದರು.

ಕನ್ನಡಿಗರ ಮೇಲೆ ಮರಾಠಿಗರು, ಪರರಾಜ್ಯದ ಪುಂಡರ ಹಲ್ಲೆ ಖಂಡಿಸಿ ಮಾರ್ಚ್ 22ರಂದು ಶನಿವಾರ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದೇ ವೇಳೆ ಕನ್ನಡಿಗ ನಟ ಶಿವಾಜಿ ಪಾತ್ರ ಮಾಡಿದರೆ ಸಿನಿಮಾ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್, ಶಿವಸೇನೆಯನ್ನು ನಿಷೇಧ ಮಾಡಬೇಕು. ಬೆಳಗಾವಿ ನಮ್ಮದು. ಬೆಳಗಾವಿಯಲ್ಲಿ ಶಿವಾಜಿ, ಸಂಭಾಜಿ ಪ್ರತಿಮೆ ಬೇಕಾ? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡಿಗರ ಮೇಲೆ ಪರಭಾಷಿಗರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರ ಮೇಲೆಯೇ ದೌರ್ಜನ್ಯ ನಡೆಸುತ್ತಿದ್ದಾರೆ. ಕನ್ನಡದಲ್ಲಿ ಮಾತನಾಡಿದರೆ ಬೇರೆ ರಾಜ್ಯದವರು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿರುವ ಘಟನೆ ನಡೆಯುತ್ತಿರುವುದು ಖಂಡನೀಯ. ಇಂತಹ ಘಟನೆಗಳು ನಿಲ್ಲಬೇಕು ಎಂದು ಗುಡುಗಿದರು.
ಈ ನಿಟ್ಟಿನಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿರುವ ಬೇರೆ ರಾಜ್ಯದವರು ಕನ್ನಡ ಕಲಿಯಲೇಬೇಕು. ಇಲ್ಲವಾದಲ್ಲಿ ಕರ್ನಾಟಕ ಬಿಟ್ಟು ಹೋಗಬೇಕು ಎಂದು ಆಗ್ರಹಿಸಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular