HomeKarnatakaBIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ಖಡಕ್ ಆದೇಶ ಹೊರಡಿಸಿದ...

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ಖಡಕ್ ಆದೇಶ ಹೊರಡಿಸಿದ ‘ಸಿಎಂ ಸಿದ್ದರಾಮಯ್ಯ’.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ಹೊರಡಿಸಿದ್ದು, ನಿಯಮ ಉಲ್ಲಂಘಿಸಿದ್ರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಏನಿದು ಆದೇಶ

ದಿನಾಂಕ:29.08.1966ರಲ್ಲಿ ಸರ್ಕಾರಿ ನೌಕರರು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸುವಾಗ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಯವರಿಗೆ ಸಲ್ಲಿಸುವಂತೆ ಮತ್ತು ಇಲಾಖಾ ಸಚಿವರಿಗೆ ನೇರವಾಗಿ ಸಲ್ಲಿಸದಿರುವಂತೆ ಹಾಗೂ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ: ಡಿಪಿಎಆರ್ 11 ಎಸ್ಆರ್ ಸಿ 80. ದಿನಾಂಕ: 21.05.1980 ರಲ್ಲಿ ಸರ್ಕಾರಿ ನೌಕರರು ತಮ್ಮ ಸೇವಾ ವಿಷಯಗಳ ಬಗ್ಗೆ ರಾಜಕೀಯ ಅಥವಾ ಇನ್ನಿತರೆ ಪ್ರಭಾವವನ್ನು ಬೀರದಿರುವ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದಾಗ್ಯೂ, ಕೆಲವು ಸರ್ಕಾರಿ ನೌಕರರು ಸದರಿ ಸೂಚನೆಗಳನ್ನು ಪಾಲಿಸದೆ ತಮ್ಮ ವರ್ಗಾವಣೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಯವರಿಗೆ/ಸಚಿವರಿಗೆ/ಶಾಸಕರಿಗೆ ಸಲ್ಲಿಸುತ್ತಿರುವುದು ಹಾಗೂ ನೇರವಾಗಿ ಮನವಿಗಳನ್ನು ಪ್ರಭಾವ ಬೀರುತ್ತಿರುವುದು ಕಂಡುಬಂದಿದೆ. ಆದ್ದರಿಂದ, ಮೇಲ್ಕಂಡ ಸರ್ಕಾರಿ ಆದೇಶಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲು ಹಾಗೂ ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular