BIG NEWS : ಪ್ರಧಾನಿ ಮೋದಿ ಮುಂದೆ ʻಪಂಚ ಬೇಡಿಕೆʼಗಳನ್ನು ಇಟ್ಟ ಸಿಎಂ ಸಿದ್ದರಾಮಯ್ಯ: ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಬರದಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಈ ಸಂಬಂದ 18,177.44 ಕೋಟಿ ರೂ. ಗಳ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರುಉ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ,  ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯನ್ನು ತುರ್ತಾಗಿ ಕರೆದು, ಬರ ಪರಿಹಾರ ಬಿಡುಗಡೆಗೊಳಿಸಿಲು ಸೂಚನೆ ನೀಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ-ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಿಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದು ಹೇಳಿದ್ದಾರೆ.

ಪಂಚ ಬೇಡಿಕೆಗಳು

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಆಗಬೇಕು ಎಂದರೆ ಗೃಹ ಸಚಿವರಾದ ಅಮಿತ್‌ ಶಾ ಅವರ ನೇತೃತ್ವದ ಹೈ-ಪವರ್ ಕಮಿತಿ ಸಭೆ ನಡೆಸಿ ಒಪ್ಪಿಗೆ ನೀಡಬೇಕು. ನಾವು ಇದುವರೆಗೂ ಮೂರು ಬಾರಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಈ ಸಮಿತಿ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು.

ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಮಾನವ ದಿನಗಳನ್ನು ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಈ ಮನವಿಯನ್ನು ಮಾಡಿದ್ದೇವೆ. ಆದರೆ ಈ ನಮ್ಮ ಮನವಿ ಇನ್ನೂ ಈಡೇರಿಕೆಯಾಗಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳಬೇಕು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ Nirmala Sitharaman ಅವರು ಬಜೆಟ್ ನಲ್ಲಿ ರೂ. 5,300 ಕೋಟಿ ಘೋಷಿಸಿದ್ದರು‌. ಇವರ ಘೋಷಣೆ ಆಧಾರದಲ್ಲಿ ಹಿಂದಿನ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಕೂಡ ರೂ. 5,300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್ ಮೆಂಟ್ ಆಗಿತ್ತು. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಬೇಕು.

ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಕೂಡ ಆಗಿದೆ. ಯೋಜನೆಯ ಜಾರಿಗೆ ಬೇರೆ ಯಾವ ಅಡೆತಡೆ ಇಲ್ಲ. ಪರಿಸರ ತೀರುವಳಿ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರ ಸರ್ಕಾರವೇ ಕೊಡಬೇಕಿದ್ದು, ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಸರ್ಕಾರ ಪರಿಸರ ಅನುಮತಿ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಅನುಮತಿ ಕೊಡಿಸಬೇಕು.

ಮೇಕೆದಾಟು ಕುಡಿಯುವ ನೀರಿನ ಯೋಜನೆಯಾಗಿದ್ದು, ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವಂತಹುದ್ದು. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಕುಡಿಯುವ ನೀರಿನ ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರು ಕೂಡ ತಮಿಳುನಾಡಿಗೇ ಹೋಗುತ್ತದೆ. ಇದರಿಂದ ಅವರಿಗೇ ಹೆಚ್ಚಿನ ಅನುಕೂಲ.

ಮೇಕೆದಾಟು ಯೋಜನೆ ಪೂರ್ಣಗೊಂಡರೆ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗತ್ತೆ. ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read