HomeKarnatakaBIG NEWS : ಇಂದಿನಿಂದ 3 ದಿನ 'ಸಿಎಂ ಸಿದ್ದರಾಮಯ್ಯ' ಮೈಸೂರು ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ...

BIG NEWS : ಇಂದಿನಿಂದ 3 ದಿನ ‘ಸಿಎಂ ಸಿದ್ದರಾಮಯ್ಯ’ ಮೈಸೂರು ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ..!

ಬೆಂಗಳೂರು : ರಾಜೀನಾಮೆಗೆ ವಿಪಕ್ಷಗಳು ಬಿಗಿಪಟ್ಟು ಹಿಡಿದಿರುವ ಬೆನ್ನಲ್ಲೇ ಇಂದಿನಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಿಗ್ಗೆ 10.20ಕ್ಕೆ ಮೈಸೂರಿಗೆ ಬಂದಿಳಿಯುವ ಅವರು, ಬೆಳಿಗ್ಗೆ 10.45ಕ್ಕೆ ಅಂಬಾವಿಲಾಸ ಅರಮನೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಿರುವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಹಾಗೆಯೇ ಸೆ.28ರಂದು ಬೆಳಿಗ್ಗೆ 10ಕ್ಕೆ ಸಿದ್ದಾರ್ಥನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಲ್ಲಿ ಭಾಗವಹಿಸಲಿರುವ ಸಿಎಂ ಮಧ್ಯಾಹ್ನ 3ಕ್ಕೆ ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಸಮಾರೋಪ ಸಮಾರಂಭ ಮತ್ತು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸೆ.29ರಂದು ಬೆಳಿಗ್ಗೆ 11ಕ್ಕೆ ಹಿಂದುಳಿದ ವರ್ಗಗಳ ವಸತಿನಿಲಯಗಳ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಮತ್ತು ಸಂಜೆ 4ಕ್ಕೆ ಅಶೋಕಪುರಂನ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 6ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular