ಬೆಂಗಳೂರು: ಸಂಪುಟ ಸಹೋದ್ಯೋಗಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಆಯೋಜಿಸಿದ್ದಾರೆ. ಸಚಿವ ಸಂಪುಟ ಪುನಾರಚನೆಗೆ ಮುನ್ನ ಸಚಿವರಿಗೆ ಔತಣಕೂಟ ಆಯೋಜಿಸಲಾಗಿದೆ.
ಬಿಹಾರ ಚುನಾವಣೆ ಫಲಿತಾಂಶದ ನಂತರ ಸಚಿವ ಸಂಪುಟ ಪುನರ್ ರಚನೆ ಬಹುತೇಕ ಫಿಕ್ಸ್ ಎಂದು ಹೇಳಲಾಗಿದೆ. ಸಚಿವರನ್ನು ವಿಶ್ವಾಸಕ್ಕೆ ಪಡೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿಯೂ ಔತಣಕೂಟ ಮಹತ್ವ ಪಡೆದುಕೊಂಡಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರು ಹೇಗೆ ತೊಡಗಿಸಿಕೊಳ್ಳಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ನವೆಂಬರ್ ಕ್ರಾಂತಿಯ ಸದ್ದು ಕೇಳಿ ಬರುತ್ತಿರುವುದರ ನಡುವೆಯೇ ಸಿಎಂ ಸೋಮವಾರ ಔತಣಕೂಟ ಆಯೋಜಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ನವೆಂಬರ್ ಕ್ರಾಂತಿ, ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಿಕೊಂಡು ಸಂಪುಟ ಪುನಾರಚನೆ ಬಗ್ಗೆ ಸಚಿವರ ಜತೆಗಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.