HomeLatest NewsBIG NEWS: ಸಚಿವರೊಂದಿಗೆ ಇಂದು ಸಿಎಂ ಸಿದ್ಧರಾಮಯ್ಯ ಡಿನ್ನರ್ ಮೀಟಿಂಗ್: ಯಾರಿಗೆ ಶಾಕ್ ಗೊತ್ತಾ…?

BIG NEWS: ಸಚಿವರೊಂದಿಗೆ ಇಂದು ಸಿಎಂ ಸಿದ್ಧರಾಮಯ್ಯ ಡಿನ್ನರ್ ಮೀಟಿಂಗ್: ಯಾರಿಗೆ ಶಾಕ್ ಗೊತ್ತಾ…?

ಬೆಂಗಳೂರು: ಸಂಪುಟ ಸಹೋದ್ಯೋಗಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಆಯೋಜಿಸಿದ್ದಾರೆ. ಸಚಿವ ಸಂಪುಟ ಪುನಾರಚನೆಗೆ ಮುನ್ನ ಸಚಿವರಿಗೆ ಔತಣಕೂಟ ಆಯೋಜಿಸಲಾಗಿದೆ.

ಬಿಹಾರ ಚುನಾವಣೆ ಫಲಿತಾಂಶದ ನಂತರ ಸಚಿವ ಸಂಪುಟ ಪುನರ್ ರಚನೆ ಬಹುತೇಕ ಫಿಕ್ಸ್ ಎಂದು ಹೇಳಲಾಗಿದೆ. ಸಚಿವರನ್ನು ವಿಶ್ವಾಸಕ್ಕೆ ಪಡೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿಯೂ ಔತಣಕೂಟ ಮಹತ್ವ ಪಡೆದುಕೊಂಡಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರು ಹೇಗೆ ತೊಡಗಿಸಿಕೊಳ್ಳಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ನವೆಂಬರ್ ಕ್ರಾಂತಿಯ ಸದ್ದು ಕೇಳಿ ಬರುತ್ತಿರುವುದರ ನಡುವೆಯೇ ಸಿಎಂ ಸೋಮವಾರ ಔತಣಕೂಟ ಆಯೋಜಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ನವೆಂಬರ್ ಕ್ರಾಂತಿ, ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಿಕೊಂಡು ಸಂಪುಟ ಪುನಾರಚನೆ ಬಗ್ಗೆ ಸಚಿವರ ಜತೆಗಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular