BIG NEWS : ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಬಗ್ಗೆ CM ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ಮ ಸುಮ್ಮನೆ ಬರುವುದಿಲ್ಲ ಎಂದರು.

ಇಂಥಾ ತೀರ್ಮಾನ ಮಾಡಬೇಕಾಗುತ್ತದೆ. ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.

ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, “ಒಳ ಮೀಸಲಾತಿಗೆ ತಮ್ಮ ವಿರೋಧ ಇಲ್ಲ” ಎನ್ನುವ ನಿರ್ಣಯ ಮಾಡಿದ್ದಾಗಿದೆ. ಹೀಗಾಗಿ ಎಲ್ಲರೂ ಒಳಮೀಸಲಾತಿ ಪರವಾಗಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್ ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ. ನಿನ್ನೆಯ ಕ್ಯಾಬಿನೆಟ್ ನಲ್ಲಿ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ, ಮುನಿಯಪ್ಪ ಅವರು ಎಲ್ಲರೂ ಮಾತನಾಡಿದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ. ಆದರೆ ಸೂಕ್ತ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ. ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶಗಳ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಶನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದರು.

https://twitter.com/siddaramaiah/status/1851179894941548595

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read