HomeLatest NewsBIG NEWS: ಭಾರೀ ವಿರೋಧಕ್ಕೆ ಮಣಿದ ಆಯೋಗ: ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗೆ...

BIG NEWS: ಭಾರೀ ವಿರೋಧಕ್ಕೆ ಮಣಿದ ಆಯೋಗ: ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗೆ ಕೊಕ್

ಬೆಂಗಳೂರು: ಭಾರಿ ವಿರೋಧದ ಹಿನ್ನೆಲೆ ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈ ಬಿಡಲಾಗಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರ ಆದವರು ಇತರೆ ಕಾಲಂನಲ್ಲಿ ಜಾತಿ ಬರೆಸಲು ಅವಕಾಶ ನೀಡಲಾಗಿದೆ.

ಮೀಸಲಾತಿ ರದ್ದು ತಡೆಗೆ 13 ಜಾತಿಗಳನ್ನು ಕ್ರಿಶ್ಚಿಯನ್ ನಲ್ಲೇ ಮುಂದುವರಿಸಲಾಗುವುದು. ಇದರಿಂದಾಗಿ ಜಾತಿ ಗಣತಿಗೆ ಇದ್ದ ತೊಡಕು ನಿವಾರಣೆಯಾಗಿದ್ದು, ನಾಳೆಯಿಂದಲೇ ಸರ್ವೆ ಕಾರ್ಯ ಆರಂಭವಾಗಲಿದೆ.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಲಿಂಗಾಯಿತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಹೀಗೆ 46 ಹಿಂದೂ ಜಾತಿಗಳ ಹೆಸರನ್ನು ಕ್ರಿಶ್ಚಿಯನ್ ನೊಂದಿಗೆ ಸೇರಿಸಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಗೆ ತೀವ್ರ ವಿರೋಧವಾದ ಹಿನ್ನೆಲೆಯಲ್ಲಿ ಆನ್ಲೈನ್ ಸಮೀಕ್ಷಾ ನಮೂನೆಯಿಂದ 33 ಜಾತಿಗಳ ಹೆಸರು ಕೈಬಿಡಲು ಹಿಂದುಳಿದ ವರ್ಗಗಳ ಆಯೋಗ ನಿರ್ಧಾರ ಕೈಗೊಂಡಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರು ಬಯಸಿದಲ್ಲಿ ತಮ್ಮ ಮೂಲ ಜಾತಿಯ ಹೆಸರನ್ನು ಇತರೆ ಕಾಲಂನಲ್ಲಿ ನಮೂದಿಸಲು ಅವಕಾಶ ನೀಡಲು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular