HomeKarnatakaBIG NEWS : ರಾಜ್ಯ ಸರ್ಕಾರದ ಸಭೆಸಮಾರಂಭಗಳಲ್ಲಿ ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ :...

BIG NEWS : ರಾಜ್ಯ ಸರ್ಕಾರದ ಸಭೆ\ಸಮಾರಂಭಗಳಲ್ಲಿ ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ

ಬೆಂಗಳೂರು : ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಪಾಲೀಸಬೇಕಾದ ಶಿಷ್ಟಾಚಾರದ ಕ್ರಮಗಳ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲೆಯಲ್ಲಿ ಗ್ರಾಮ ಪಂಚಾಯತ, ತಾಲೂಕ, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಆಹ್ವಾನ ಪತ್ರಿಕೆಗಳನ್ನು ಮುದ್ರಿಸುವಲ್ಲಿ ಮತ್ತು ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಹಾಗೂ ಕಾರ್ಯಕ್ರಮದ ಮಾಹಿತಿಯನ್ನು ಆಹ್ವಾನ ಪತ್ರಿಕೆಯೊಂದಿಗೆ ಜನ ಪ್ರತಿನಿಧಿಗಳಿಗೆ ನೀಡುವಲ್ಲಿ ಸೂಚನೆಗಳನ್ನು ವಾಲಿಸದೇ ಜಿಲ್ಲಾಡಳಿತಕ್ಕೆ ಮುಜುಗುರ ಉಂಟು ಮಾಡುವ ಸನ್ನಿವೇಶಗಳು ಪದೇ ಪದೇ ಉದ್ಭವಿಸುತ್ತಿರುವುದು ವಿಷಾದನೀಯವಾಗಿರುತ್ತದೆ ಹಾಗೂ ಪಂಚಾಯತಿ ಅಧಿಕಾರಿಗಳು, ತಾಲೂಕ ಮಟ್ಟದ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಕಾಳಜಿ ವಹಿಸದೇ ಇರುವುದು ಸಹ ಮುಖ್ಯ ಕಾರಣ ವಾಗಿರುತ್ತದೆ. ಆದುದರಿಂದ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮವನ್ನು ಏರ್ಪಡಿಸುವ ಮುನ್ನ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಲ್ಲೇಖ!) ಮತ್ತು 12 ರಲ್ಲಿನಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸಿ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲು ಹಾಗೂ ಜನಪತಿನಿಧಿಗಳನ್ನು ಖುದ್ದಾಗಿ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಆಹ್ವಾನಿಸಲು ಕ್ರಮ ಕೈಕೊಳ್ಳುವುದು ಹಾಗೂ ಆಮಂತ್ರಣ ಪತ್ರಿಕೆಗಳಿಗೆ ಅನುಮೋದನೆಯನ್ನು ಪಡೆದುಕೊಳ್ಳುವಾಗ ಸಿಬ್ಬಂದಿಗಳನ್ನು ಕಳುಹಿಸದೇ ಖುದ್ದಾಗಿ ಬಂದು ಜಿಲ್ಲಾಧಿಕಾರಿಗಳು/ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿಯವರ ಅನುಮೋದನೆ ಪಡೆದುಕೊಳ್ಳಲು ಸೂಚಿಸಿದೆ.

ಮುಂದುವರೆದು ಇನ್ನು ಮುಂದೆ ಜಿಲ್ಲೆಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಲೋಪವಾದ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತಿನ ಕ್ರಮ ಕೈಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular