ಮೈಸೂರು: ಸಹಕಾರ ಇಲಾಖೆಯಲ್ಲಿ ಅಕ್ರಮ ನಡೆದ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಇಂತಹ ಅಕ್ರಮದಲ್ಲಿ ಭಾಗಿಯಾಗುವ ನೌಕರರ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸಹಕಾರ ಸಂಘಗಳಲ್ಲಿ ಅಕ್ರಮ ನಡೆದ ಬಗ್ಗೆ ದೂರು ದಾಖಲಾಗಿವೆ. ಅನೇಕ ಪ್ರಕರಣಗಳು ಕೋರ್ಟ್ ನಲ್ಲಿದ್ದು, ನೇರವಾಗಿ ಕ್ರಮ ಕೈಗೊಳ್ಳಲು ಕಾನೂನು ತೊಡಕುಗಳಿವೆ. ಹೀಗಾಗಿ ಸಹಕಾರ ಇಲಾಖೆಯಲ್ಲಿ ತಿದ್ದುಪಡಿ ತರಲಾಗುತ್ತಿದೆ. ಈ ಪ್ರಕ್ರಿಯೆ ಮುಗಿದ ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.