HomeLatest NewsBIG NEWS: ಅಕ್ರಮದಲ್ಲಿ ಭಾಗಿಯಾಗುವ ನೌಕರರ ಆಸ್ತಿ ಮುಟ್ಟುಗೋಲು: ಕಾನೂನಿಗೆ ತಿದ್ದುಪಡಿ

BIG NEWS: ಅಕ್ರಮದಲ್ಲಿ ಭಾಗಿಯಾಗುವ ನೌಕರರ ಆಸ್ತಿ ಮುಟ್ಟುಗೋಲು: ಕಾನೂನಿಗೆ ತಿದ್ದುಪಡಿ

ಮೈಸೂರು: ಸಹಕಾರ ಇಲಾಖೆಯಲ್ಲಿ ಅಕ್ರಮ ನಡೆದ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಇಂತಹ ಅಕ್ರಮದಲ್ಲಿ ಭಾಗಿಯಾಗುವ ನೌಕರರ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸಹಕಾರ ಸಂಘಗಳಲ್ಲಿ ಅಕ್ರಮ ನಡೆದ ಬಗ್ಗೆ ದೂರು ದಾಖಲಾಗಿವೆ. ಅನೇಕ ಪ್ರಕರಣಗಳು ಕೋರ್ಟ್ ನಲ್ಲಿದ್ದು, ನೇರವಾಗಿ ಕ್ರಮ ಕೈಗೊಳ್ಳಲು ಕಾನೂನು ತೊಡಕುಗಳಿವೆ. ಹೀಗಾಗಿ ಸಹಕಾರ ಇಲಾಖೆಯಲ್ಲಿ ತಿದ್ದುಪಡಿ ತರಲಾಗುತ್ತಿದೆ. ಈ ಪ್ರಕ್ರಿಯೆ ಮುಗಿದ ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular