ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಆರು ಹಂತಗಳ ಮತದಾನ ಪೂರ್ಣಗೊಂಡಿದೆ. ಇಂದು 7ನೇ ಹಂತದ ಮತದಾನ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮಾಧ್ಯಮಗಳು ಇಂದು ಸಂಜೆ 6.30 ರಿಂದ ಮತಗಟ್ಟೆ ಸಮೀಕ್ಷೆಯ ವಿವರಗಳನ್ನು ಪ್ರಸಾರ ಮಾಡಬಹುದಾಗಿದೆ.
ಆದರೆ, ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತ ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಕಾಂಗ್ರೆಸ್ ಮಾಧ್ಯಮ ಉಸ್ತುವಾರಿ ಪವನ್ ಖೇರಾ ಈ ಕುರಿತಂತೆ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಮ್ಮ ಪಕ್ಷ ಮತಗಟ್ಟೆ ಸಮೀಕ್ಷೆಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಯಾವುದೇ ಚರ್ಚೆಯ ಗುರಿ ಸಾರ್ವಜನಿಕರಿಗೆ ಮಾಹಿತಿ ನೀಡುವುದಾಗಿದ್ದು, ಜೂನ್ 4 ರ ಫಲಿತಾಂಶದ ಬಳಿಕ ನಾವು ಚರ್ಚೆಗಳಲ್ಲಿ ಸಂತೋಷದಿಂದ ಭಾಗವಹಿಸುತ್ತೇವೆ ಎಂದು ತಿಳಿಸಿರುವ ಅವರು, ಈ ತೀರ್ಮಾನವನ್ನು ಪಕ್ಷದೊಳಗೆ ಆಂತರಿಕವಾಗಿ ಚರ್ಚಿಸಿ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
https://twitter.com/Pawankhera/status/1796520624396910955?ref_src=twsrc%5Egoogle%7Ctwcamp%5Eserp%7Ctwgr%5Etweet