ಚನ್ನಪಟ್ಟಣದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ ನಡೆಸಿದರು.
ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮುನ್ನ ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ತಮ್ಮ ಬೆಂಬಲಿಗರ ಜೊತೆ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ : ಯೋಗೇಶ್ವರ್
ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ. ನಂತರ ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಗಳಿಂದ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವೇ ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸಂದರ್ಭ ನನಗೆ ಬಂದಿದೆ. ನಾನಿದ್ದ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷ ಸೇರಿಕೊಂಡ ನಂತರ ಎನ್ಡಿಎ ಮೈತ್ರಿಕೂಟದಲ್ಲಿ ಇದ್ದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾಗಿರಲಿಲ್ಲ ಎಂದು ಮನಗಂಡು ಸ್ವಯಂಪ್ರೇರಿತವಾಗಿ ಬೇಷರತ್ತಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದರು.
ಯೋಗೇಶ್ವರ್ ಪಕ್ಷಕ್ಕೆ ಸೇರಿರುವುದು ಆನೆ ಬಲ ಬಂದಂತಾಗಿದೆ
ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಆರಂಭಿಸಿದವರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಅವರು ಹೊಸಬರಲ್ಲ. ಇಂದು ಅವರು ಪಕ್ಷಕ್ಕೆ ಸೇರಿರುವುದು ಆನೆ ಬಲ ಬಂದಂತಾಗಿದೆ. ಕೇವಲ ಚನ್ನಪಟ್ಟಣ ಮತ್ತು ರಾಮನಗರ ಜಿಲ್ಲೆ ಮಾತ್ರವಲ್ಲ ಹಳೇ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದೆ. ಇಂದು ಮನೆಗೆ ಮರಳಿರುವ ಯೋಗೇಶ್ವರ್ ಅವರನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
LIVE : ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆ. https://t.co/tnV1yLLsAf
— Karnataka Congress (@INCKarnataka) October 24, 2024
ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ. ನಂತರ ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ.
ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಗಳಿಂದ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವೇ… pic.twitter.com/606wjsBGws
— Karnataka Congress (@INCKarnataka) October 23, 2024