HomeKarnatakaBIG NEWS : ನಾಳೆ ಸಂವಿಧಾನ ದಿನಾಚರಣೆ : ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ...

BIG NEWS : ನಾಳೆ ಸಂವಿಧಾನ ದಿನಾಚರಣೆ : ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ‘ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ.!

ಬೆಂಗಳೂರು : ನಾಳೆ ಸಂವಿಧಾನ ದಿನಾಚರಣೆ ಹಿನ್ನೆಲೆ ಶಾಲಾ, ಕಾಲೇಜು ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಅಂಬೇಡ್ಕರ್ ಭಾವಚಿತ್ರ’ ಇಡುವುದು ಕಡ್ಡಾಯವಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ . ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು.

ನವೆಂಬರ್ 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ ಸರ್ಕಾರ ಆದೇಶ ಹೊರಡಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular