HomeLatest NewsBIG NEWS: ಗ್ರಾಹಕರು ಬಳಸದ ವಿದ್ಯುತ್ ಗೆ ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

BIG NEWS: ಗ್ರಾಹಕರು ಬಳಸದ ವಿದ್ಯುತ್ ಗೆ ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಗ್ರಾಹಕರು ಬಳಸದ ವಿದ್ಯುತ್ ಗೆ ತೆರಿಗೆ ಕಟ್ಟಬೇಕಿಲ್ಲವೆಂದು ಹೈಕೋರ್ಟ್ ನಿಂದ ತೀರ್ಪು ನೀಡಲಾಗಿದೆ. ಕನಿಷ್ಠ ವಿದ್ಯುತ್ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ ಎಂದು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ.

ಬಳಸಿದ ವಿದ್ಯುತ್ ಶುಲ್ಕಕ್ಕೆ ಮಾತ್ರ ತೆರಿಗೆ ವಿಧಿಸಬಹುದು. ಆದರೆ, ಕನಿಷ್ಠ ವಿದ್ಯುತ್ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ ಎಂದು ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ. ಗ್ರಾಹಕರು ಬಳಕೆ ಮಾಡದ ವಿದ್ಯುತ್ ಗೆ ತೆರೆಗೆ ಕಟ್ಟಬೇಕಿಲ್ಲವೆಂದು ತೀರ್ಪು ನೀಡಿದ್ದಾರೆ. ಕರ್ನಾಟಕ ವಿದ್ಯುತ್ ಕಾಯ್ದೆ ಸೆಕ್ಷನ್ 3(1) ರ ಅಡಿ ತಿದ್ದುಪಡಿ ಹೈಕೋರ್ಟ್ ರದ್ದುಪಡಿಸಿದೆ.

ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್ ಸೆಟ್ ಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವರ್ಗದ ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಕನಿಷ್ಠ ಶುಲ್ಕದ ಮೇಲೆ ವಿಧಿಸಲು ಕರ್ನಾಟಕ ವಿದ್ಯುತ್ ಬಳಕೆ ಮೇಲಿನ ತೆರಿಗೆ ಕಾಯ್ದೆಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿ ನಿಯಮ ಆಸಾಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿದ್ದುಪಡಿ ನಿಯಮ ಪ್ರಶ್ನಿಸಿ 2008ರಲ್ಲಿ ಬೆಂಗಳೂರಿನ ಸೋನಾ ಸಿಂಥೆಟಿಕ್ಸ್ ಕಂಪನಿ, ಶ್ರೀ ಕೃಷ್ಣ ಸ್ಟಿನ್ನಿಂಗ್ ಮತ್ತು ವೀವಿಂಗ್ ಮಿಲ್ಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 10 ಕಂಪನಿಗಳು, 2009ರಲ್ಲಿ ಎಫ್.ಕೆ.ಸಿ.ಸಿ.ಐ. ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಪೀಠದಿಂದ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

ಕನಿಷ್ಠ ಶುಲ್ಕದ ಮೇಲಿನ ತೆರಿಗೆಯನ್ನು ಅಸಂವಿಧಾನಕವೆಂದು ಘೋಷಿಸಲಾಗಿದೆಯೇ ಹೊರತೂ ಬಳಸಲ್ಪಟ್ಟ ವಿದ್ಯುತ್ ಗೆ ವಿಧಿಸಿರುವ ತೆರಿಗೆಯನ್ನಲ್ಲ ಎಂದು ಇದೇ ವೇಳೆ ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಈ ಆದೇಶದಿಂದ ವಿದ್ಯುತ್ ಸರಬರಾಜು ಕಂಪನಿಗಳು ಅರ್ಜಿದಾರರ ಕಂಪನಿಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ಹಣ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular