HomeLatest NewsBIG NEWS: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

BIG NEWS: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ಮದ್ದೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತವಾಗಿದೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ‌.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದನ್ನು ಬಿಜೆಪಿ ವರಿಷ್ಠರು ತೀರ್ಮಾನಿಸುತ್ತಾರೆ. ಆದರೆ, ಮದ್ದೂರು ಕ್ಷೇತ್ರ ನನ್ನ ಪ್ರಥಮ ಆದ್ಯತೆಯಾಗಿದೆ. ನಾನು ಅಥವಾ ಪುತ್ರ ಅಭಿಷೇಕ್ ಪೈಕಿ ಯಾರೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರೂ ಅದು ಮದ್ದೂರಿನಿಂದಲೇ ಎಂದು ತಿಳಿಸಿದ್ದಾರೆ.

2018ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದೆ. ಈಗ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದೇನೆ. ಪಕ್ಷದ ನಾಯಕರ ತೀರ್ಮಾನದಂತೆ ನಿರ್ಧಾರ ಕೈಗೊಳ್ಳುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರಿನಿಂದ ಸ್ಪರ್ಧೆ ಬಿಜೆಪಿ ನಾಯಕರು ಆಹ್ವಾನಿಸಿದ್ದರು. ಆಗ ರಾಜ್ಯ ರಾಜಕಾರಣದ ಮನಸ್ಸು ಇಲ್ಲ ಎಂದಿದ್ದೆ. ಮದ್ದೂರು ಅಂಬರೀಶ್ ಕರ್ಮ ಭೂಮಿಯಾಗಿದ್ದು, ಹೀಗಾಗಿ ನಾನು ಅಥವಾ ಅಭಿಷೇಕ್ ಇಲ್ಲಿಂದ ಸ್ಪರ್ಧಿಸಬೇಕೆಂಬುದು ಅಭಿಮಾನಿಗಳ ಅಪೇಕ್ಷೆಯಾಗಿದೆ. ನಮ್ಮಿಬ್ಬರಲ್ಲಿ ಒಬ್ಬರು ಮದ್ದೂರಿನಿಂದ ಸ್ಪರ್ಧಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular