HomeKarnatakaBIG NEWS : ಮೊಟ್ಟೆ -ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಬೇಯಿಸಿ ಸೇವಿಸಿದ್ರೆ ಅಪಾಯವಿಲ್ಲ :...

BIG NEWS : ಮೊಟ್ಟೆ -ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಬೇಯಿಸಿ ಸೇವಿಸಿದ್ರೆ ಅಪಾಯವಿಲ್ಲ : ಸಚಿವ ದಿನೇಶ್ ಗುಂಡೂರಾವ್.!

ಬೆಂಗಳೂರು : ಮೊಟ್ಟೆ -ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಬೇಯಿಸಿ ಸೇವಿಸಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಚಿವರು  ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ. #ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ. ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular