HomeKarnatakaBIG NEWS : ಕೊರೊನಾ ಆತಂಕ : ಇಂದು ಮಹತ್ವದ ರಾಜ್ಯ ʻಕೋವಿಡ್ ಸಮಿತಿʼ ಸಭೆ

BIG NEWS : ಕೊರೊನಾ ಆತಂಕ : ಇಂದು ಮಹತ್ವದ ರಾಜ್ಯ ʻಕೋವಿಡ್ ಸಮಿತಿʼ ಸಭೆ

 

ಬೆಂಗಳೂರು : ಕೇರಳದಲ್ಲಿ ಹೊಸ ರೂಪಾಂತರಿ ಕೊರೊನಾ ತಳಿ ಪತ್ತೆ ಹಾಗೂ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಇಂದು ಸರ್ಕಾರಕ್ಕೆ ಶಿಫಾರಸು ಮಾಡಲು ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊರೊನಾ ಹೆಚ್ಚಾಗುತ್ತಿರುವ ಸಮಯದಲ್ಲೇ ಕ್ರಿಸ್ ಮಸ್‌ ಹೊಸ ವರ್ಷಾಚರಣೆ ಬರುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು  ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ. ಜೊತೆಗೆ 60 ವರ್ಷ ಮೇಲ್ಪಟ್ಟವರು, ಹಾಗೂ ದೀರ್ಘಕಾಲಿನ ಅನಾರೋಗ್ಯ ಸಮಸ್ಯೆಯುಳ್ಳವರು, ಸೋಂಕುಳ್ಳವರು, ಆರೋಗ್ಯ ಸಿಬ್ಬಂದಿಗೆ ಮಾಸ್ಕ್‌ ಕಡ್ಡಾಯ, ಮುನ್ನೆಚ್ಚರಿಕಾ ಲಸಿಕೆ ಕಡ್ಡಾಯಗೊಳಿಸುವ ಸಾಧ್ಯತೆ ಇದೆ.

ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌,ರಾಜ್ಯದಲ್ಲಿ ಕೊರೊನಾ ವೈರಾಣುವಿನ ಹೊಸ ರೂಪಾಂತರಿ ಕುರಿತು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಖಾಯಿಲೆ, ಜ್ವರ, ಕಫ, ಶೀತ ಇರುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದ ಎಲ್ಲಾ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್, ಔಷಧಗಳ ಸಂಗ್ರಹ, ಐಸಿಯು ಮತ್ತು ಹಾಸಿಗೆ ಸಾಮರ್ಥ್ಯಗಳ ಲಭ್ಯತೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನೆರೆಯ ಕೇರಳದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಏರಿಕೆಯಾಗಿರುವುದರಿಂದ ಕೊಡಗು, ಮಂಗಳೂರು, ಚಾಮರಾಜನಗರದ ಗಡಿ ಭಾಗಗಳ ಮೂಲಕ ರಾಜ್ಯಕ್ಕೆ ಪ್ರವೇಶಿಸುವವರ ತಪಾಸಣೆ ಸೇರಿದಂತೆ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular