BIG NEWS : ಕೊರೊನಾ ಹೆಚ್ಚಳ : ರಾಜ್ಯದಲ್ಲಿ ಮತ್ತೆ ಕೋವಿಡ್ ʻವ್ಯಾಕ್ಸಿನೇಷನ್ʼ ಗೆ ಸಿದ್ಧತೆ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತೆ ವ್ಯಾಕ್ಸಿನೇಷನ್‌ ಕುರಿತಂತೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವ ಗಡಿ ಭಾಗದ ಐದು ಕಡೆಗಳಲ್ಲಿ ತಾತ್ಕಾಲಿಕ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ತಪಾಸಣೆಯನ್ನು ಹೆಚ್ಚಿಸಲಾಗಿದ್ದು, ಧ್ವನಿವರ್ಧಕ ಮೂಲಕ ಜಾಗೃತಿ ಹಾಗೂ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಆರ್‌ಟಿಪಿಸಿಆರ್‌,, ಪಿಪಿಇ ಕಿಟ್‌ಗಳ ಲಭ್ಯತೆ, ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಕಾರ್ಯ ನಿರ್ವಹಣೆ ಸೇರಿದಂತೆ ಎಲ್ಲಾ ತಾಲೂಕು, ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ತಜ್ಞರ ತಂಡ ಸೂಚನೆ ನೀಡಿದ್ರೆ ಮಾತ್ರ ವ್ಯಾಕ್ಸಿನೇಷನ್‌ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕ್ರಿಸ್ಮಸ್, ಹೊಸ ವರ್ಷ ಸಂಭ್ರಮಾಚರಣೆಗಳಿಗೆ ಯಾವುದೇ ರೀತಿಯ ಪ್ರತ್ಯೇಕ ನಿರ್ಬಂಧ ಅಥವಾ ಹೊಸ ಮಾರ್ಗಸೂಚಿ ಇರುವುದಿಲ್ಲ. ಆದರೆ ಅಗತ್ಯ ಮುಂಜಾಗೃತಾ ಹಾಗೂ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read