BIG NEWS: ಶೀತಜ್ವರ, ಉಸಿರಾಟದ ಸಮಸ್ಯೆ ಇರುವವರಿಗೆ ‘ಕೋವಿಡ್ ಟೆಸ್ಟ್’ ಕಡ್ಡಾಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶೀತಜ್ವರ (ಐಎಲ್ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎದುರಿಸುತ್ತಿರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಕಾಸ ಸೌಧದಲ್ಲಿ ಇಂದು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು,ರಾಜ್ಯದಲ್ಲಿ ಪ್ರತಿನಿತ್ಯ 7 ಸಾವಿರಕ್ಕೂ ಅಧಿಕ ಕೋವಿಡ್ ಟೆಸ್ಟ್‌ಗಳನ್ನ ಮಾಡಲಾಗುತ್ತಿದೆ. ಹೋಮ್ ಕ್ವಾರಂಟೈನಲ್ಲಿರುವವರ ಮೇಲೆ ವಿಶೇಷ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.

ಶೀತಜ್ವರ (ಐಎಲ್ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎದುರಿಸುತ್ತಿರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಮುಂದಿನ ವಾರದಿಂದ ಪಾಸಿಟಿವ್ ದರ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read