ಹಾವೇರಿ: ಡಿಜೆ ಬಳಕೆಗೆ ಅನುಮತಿ ನೀಡುವವರೆಗೂ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಸೇರಿದಂತೆ ಗ್ರಾಮದ ಯಾವುದೇ ಸಾರ್ವಜನಿಕ ಗಣಪತಿಗಳನ್ನು ವಿಸರ್ಜನೆ ಮಾಡದಿರಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಭಾನುವಾರ ಐದನೇ ದಿನಕ್ಕೆ ಗಣಪತಿ ವಿಸರ್ಜನೆ ಮಾಡಬೇಕಿತ್ತು. ಚಳಗೇರಿ ಟೋಲ್ ಸಮೀಪ ಡಿಜೆ ಸೌಂಡ್ ಸಿಸ್ಟಂ ಗ್ರಾಮಕ್ಕೆ ಬರದಂತೆ ಪೊಲೀಸರು ತಡೆದಿದ್ದಾರೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪೂರ್ಣ ಡಿಜೆ ಬೇಡ, ಒಂದೆರಡು ಡಿಜೆ ಬಾಕ್ಸ್ ಕೊಡಿ ಸಾಕು ಎಂದು ಕೇಳಿಕೊಂಡರು ಪೊಲೀಸರು ಅನುಮತಿ ನೀಡಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸಾಮೂಹಿಕವಾಗಿ ಗಣಪತಿ ವಿಸರ್ಜನೆ ಮಾಡದಿರಲು ನಿರ್ಧಾರ ಕೈಗೊಂಡಿದ್ದಾರೆ.
ಡಿಜೆ ಬಳಕೆಗೆ ಅವಕಾಶ ನೀಡುವವರೆಗೆ ಮೋಟೆಬೆನ್ನೂರು ಹಿಂದೂ ಮಹಾ ಗಣಪತಿ ಸೇರಿ ಯಾವುದೇ ಗಣಪತಿ ವಿಸರ್ಜಿಸುವುದಿಲ್ಲ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದ್ದಾರೆ.