ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವದ ಎರಡು ಗ್ಯಾರಂಟಿ ಯೋಜನೆ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳನ್ನು ಪರಿಷ್ಕರಿಸಲಾಗುವುದು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಶಾಸಕರ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮಾ ಮಾಡಲಾಗುತ್ತಿದೆ. ಆದರೆ ಅರ್ಹತೆ ಇಲ್ಲದವರು ಮತ್ತು ಮೃತಪಟ್ಟವರ ಹೆಸರಿನಲ್ಲಿಯೂ ಹಣ ಪಡೆಯಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಲ್ಲಿಯೂ ಅನೇಕರು ಅರ್ಹತೆ ಮೀರಿದವರು ಫಲಾನುಭವಿಗಳಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎರಡು ಯೋಜನೆಗಳ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಿದೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪರಿಷ್ಕರಣೆ ಮಾಡಿ ಹಣ ಹಾಕಲು ಚಿಂತನೆ ನಡೆದಿದೆ. ಎರಡು ಗ್ಯಾರಂಟಿಗಳ ಫಲಾನುಭವಿಗಳ ಪರಿಷ್ಕರಣೆಗೆ ಚಿಂತನೆ ನಡೆದಿದೆ. ಗೃಹಲಕ್ಷ್ಮಿ 1.24 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಸ್ವೀಕರಿಸಲಾಗುವುದು. ಯಾರು ಹೊಸದಾಗಿ ಅರ್ಜಿ ಸಲ್ಲಿಸುವುದಿಲ್ಲವೋ ಅಂತಹವರ ಗೃಹಲಕ್ಷ್ಮಿ ಗ್ಯಾರಂಟಿ ನಿಲ್ಲಿಸಲಾಗುವುದು. ಮೃತಪಟ್ಟವರ ಹೆಸರಲ್ಲಿ ಲಕ್ಷಾಂತರ ಮೊಬೈಲ್ ನಂಬರ್ ಗಳು ಇವೆ. ದೊಡ್ಡ ಸಂಖ್ಯೆಯಲ್ಲಿ ಫಲಾನುಭವಿಗಳಿಗೆ ಕೊಕ್ ನೀಡಲು ಸರ್ಕಾರ ಮುಂದಾಗಿದೆ.

