BIG NEWS : ಜನವರಿ 22 ರಂದು ಸರ್ಕಾರಿ ರಜೆ ಘೋಷಿಸಿ : ರಾಜ್ಯ ಸರ್ಕಾರಕ್ಕೆ ಆರ್.‌ ಅಶೋಕ್‌ ಪತ್ರ

ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಜೆ ಘೋಷಿಸುವಂತೆ ವಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಆರ್.‌  ಅಶೋಕ್‌, 500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗಿ ಜನವರಿ 22 ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಈ ದಿನದಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತಿದೆ ಎಂದರು.

ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯಲ್ಲಿಭಾಗವಹಿಸಿದ್ದು ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ. ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕು ಉಂಟಾಗಬಹುದು. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಅನುಕೂಲವಾಗುವಂತೆ ಜನವರಿ 22 ರಂದು ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆಯನ್ನುಘೋಸಬೇಕೆಂದುತಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read