BIG NEWS : ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಮಾನಹಾನಿ ಪೋಸ್ಟ್ ; ಕಾನೂನು ಕ್ರಮಕ್ಕೆ ಮುಂದಾದ ಅಪ್ಪು ಫ್ಯಾನ್ಸ್..!

ಬೆಂಗಳೂರು : ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಅವಹೇಳನಕಾರಿ, ಕೆಟ್ಟದಾದ ಪೋಸ್ಟ್ ಹಾಕಿದ ಕಿಡಿಗೇಡಿ ವಿರುದ್ಧ ಪುನೀತ್ ಅಭಿಮಾನಿಗಳು ರೊಚ್ಚಿಗೆದ್ದು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ನಕಲಿ ಖಾತೆ ಸೃಷ್ಟಿಸಿ ಕಿಡಿಗೇಡಿಯೊಬ್ಬ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಇದರಿಂದ ರೊಚ್ಚಿಗೆದ್ದ ಅಪ್ಪು ಅಭಿಮಾನಿಗಳು ಇಂದು ಪೊಲೀಸ್ ಕಮೀಷನರ್ ಭೇಟಿಯಾಗಿ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ಐಪಿಎಲ್ ಶುರುವಾಗಿದ್ದು, ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಇದ್ದ ಹೆಸರನ್ನು ಬದಲಾವಣೆ ಮಾಡಲು, ಆರ್ಸಿಬಿ ಅನ್ಬಾಕ್ಸ್ ಇವೆಂಟ್ ಆಯೋಜನೆ ಮಾಡಿತ್ತು. ಆ ಕಾರ್ಯಕ್ರಮದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಹೆಸರನ್ನು ಬದಲಿಸಲಾಗಿತ್ತು. ಆ ಇವೆಂಟ್ಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಸಹ ಅತಿಥಿಯಾಗಿ ತೆರಳಿದ್ದರು. ಈ ಹಿನ್ನೆಲೆ ನಕಲಿ ಖಾತೆ ಸೃಷ್ಟಿಸಿ ಕಿಡಿಗೇಡಿಯೊಬ್ಬ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ.

@GAJAPADE6 ಹೆಸರಿನ ಟ್ವಿಟರ್ ಖಾತೆಯಿಂದ, “ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಗಂಡ ಸತ್ತ ಮುಂ.. ಯರನ್ನು ಕರೀಬಾರದು. ಆರ್ಸಿಬಿ ಅನ್ಬಾಕ್ಸ್ ಇವೆಂಟ್ಗೆ ಈ ಮುಂ…ಯನ್ನು ಕರೆದಿದ್ದಕ್ಕೆ ಎಲ್ಲ ಮ್ಯಾಚ್ ಸೋಲ್ತಾ ಇದ್ದಾರೆ” ಎಂದು #Yuvarajkumar #PuneethRajkumar #Yuva #Dboss #DevilTheHero ಎಂಬ ಹ್ಯಾಷ್ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ನಂತರ ಎಕ್ಸ್ ಖಾತೆಯಲ್ಲಿದ್ದ ಪೋಸ್ಟ್ ಡಿಲೀಟ್ ಮಾಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read