BIG NEWS : ಸಾಲಮನ್ನಾಗೆ ಆಗ್ರಹಿಸಿ ಫೆ.26 ಕ್ಕೆ ದೇಶಾದ್ಯಂತ ರೈತರಿಂದ ‘ದೆಹಲಿ ಚಲೋ’

ಬೆಂಗಳೂರು : ಕೃಷಿ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೇಶಾದ್ಯಂತ ರೈತರು ಫೆ. 26 ರಂದು ‘ದೆಹಲಿ ಚಲೋ’ ನಡೆಸಲಿದ್ದಾರೆ.

ಈ ಬಗ್ಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದು,  ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯಿಂದ ದೆಹಲಿ  ಯಲ್ಲಿ 1 ವರ್ಷ ಹೋರಾಟ ನಡೆಸಿದಾಗ ಬೇಡಿಕೆ ಈಡೇರಿಸುವುದಾಗಿ ಪ್ರಧಾನಿಮೋದಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಬೇಡಿಕೆಗಳನ್ನು ಈಡೇರಿಸದಿರುವುದರಿಂದ ದೆಹಲಿ ಚಲೋ ಹಮ್ಮಿಕೊಂಡಿದ್ದೇವೆ,  ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೇಶಾದ್ಯಂತ ರೈತರು ಫೆ. 26 ರಂದು ‘ದೆಹಲಿ ಚಲೋ’ ನಡೆಸಲಿದ್ದಾರೆ. ಎಂದರು.

ದೆಹಲಿ ಚಲೋಗೆ ಪೂರ್ವಭಾವಿಯಾಗಿ ರೈತರಲ್ಲಿ ಜಾಗೃತಿ ಮೂಡಿಸಲು 6 ಕಿಸಾನ್ ಮಹಾ ಪಂಚಾಯತ್ಗಳನ್ನು ಒಡಿಶಾದ ಭುವನೇಶ್ವರ, ಪಂಜಾಬ್ನ ಲೂಧಿಯಾನ ಮತ್ತು ಮೊಗಾ, ಕೇರಳದ ಪಾಲಕ್ಕಾಡ್, ತಮಿಳುನಾಡಿನ ಚೆನ್ನೈ ಮತ್ತು ಕರ್ನಾ ಟಕದ ಬೆಂಗಳೂರಿನಲ್ಲಿ ಈಗಾಗಲೇ ನಡೆಸಲಾಗಿದೆ ಎಂದು ಹೇಳಿದರು.

ದೆಹಲಿಯಲ್ಲಿ ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರಿಗೆ 2021 ರ ಡಿಸೆಂಬರ್ 21 ರಂದು ಪ್ರಧಾನ ಮಂತ್ರಿಗಳು ನೀಡಿದ್ದ ಭರವಸೆ ಈಡೇರದ ಕಾರಣ ದೇಶಾದ್ಯಂತ ಮುಂದಿನ ಫೆಬ್ರವರಿ 26 ಕ್ಕೆ ದೆಹಲಿ ಚಲೋ ಮಾಡಲು ರೈತರು ತೀರ್ಮಾನಿಸಿದ್ದಾರೆ.

ಎಲ್ಲಾ ಕೃಷಿ ಉತ್ಪನ್ನಗಳ ಆಮದು ಸುಂಕವನ್ನು ಹೆಚ್ಚಿಸಿ, ಕೃಷಿ ಉತ್ಪನ್ನಗಳ ಬೆಲೆ ಕುಸಿಯದಂತೆ ರಕ್ಷಿಸಬೇಕು. ಭಾರತ ಸರ್ಕಾರ ಡಬ್ಲ್ಯೂಟಿಒದಿಂದ ಹೊರಬರಬೇಕು. ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳನ್ನು ರದ್ದುಗೊಳಿಸಬೇಕು. ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆಯನ್ನು ನಿಲ್ಲಿಸಬೇಕು.

ವಿದ್ಯುತ್ ಮಂಡಳಿಗಳ ಖಾಸಗೀಕರಣ ಬೇಡ. ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ನಿಲ್ಲಬೇಕು. ಕೃಷಿಯಲ್ಲಿ ಎಫ್ಡಿಐ ಮತ್ತು ಇ-ಕಾಮರ್ಸ್ ಸೇರಿದಂತೆ ಚಿಲ್ಲರೆ ವ್ಯಾಪಾರದ ಎಲ್ಲಾ ಸ್ವರೂಪಗಳನ್ನು ನಿಷೇಧಿಸಲಾಗುವುದು. ಕೃಷಿ ಮತ್ತು ಚಿಲ್ಲರೆ ವ್ಯಾಪಾರದ ಕಾರ್ಪೊರೇಟೀಕರಣವನ್ನು ತಡೆಗಟ್ಟಲು ನೀತಿ ಮತ್ತು ಕಾನೂನು ಜಾರಿ ಮಾಡಬೇಕು. ಕೃಷಿ ಮತ್ತು ಚಿಲ್ಲರೆ ಸಣ್ಣ ಉದ್ಯಮಗಳಿಗೆ ಮಾತ್ರ ಮೀಸಲಿಡಬೇಕು ಎಂದು ಬೇಡಿಕೆ ಇಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read