HomeLatest NewsBIG NEWS: ರಾಜ್ಯದಲ್ಲಿ ಟಿಪ್ಪು ಜಯಂತಿ ಪುನಾರಂಭಿಸಲು ಆಗ್ರಹ: ಸದನದಲ್ಲಿ ಇಂದು ಶಾಸಕ ಕಾಶಪ್ಪನವರ್ ಪ್ರಸ್ತಾಪ

BIG NEWS: ರಾಜ್ಯದಲ್ಲಿ ಟಿಪ್ಪು ಜಯಂತಿ ಪುನಾರಂಭಿಸಲು ಆಗ್ರಹ: ಸದನದಲ್ಲಿ ಇಂದು ಶಾಸಕ ಕಾಶಪ್ಪನವರ್ ಪ್ರಸ್ತಾಪ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಪುನಾರಂಭಿಸುವಂತೆ ಒತ್ತಾಯಿಸಿ ಅಧಿವೇಶನದಲ್ಲಿ ಪ್ರಸ್ತಾಪಿಸಲು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಮುಂದಾಗಿದ್ದಾರೆ.

ವಿಧಾನಸಭೆಯಲ್ಲಿ ಇಂದು ಅವರು ಟಿಪ್ಪು ಜಯಂತಿಯನ್ನು ಪುನಾರಾರಂಭಿಸುವಂತೆ ಅವರು ಪ್ರಸ್ತಾಪ ಮಾಡಲಿದ್ದಾರೆ. ಗಮನ ಸೆಳೆಯುವ ಸೂಚನಾ ಕಲಾಪದಲ್ಲಿ ಕಾಶಪ್ಪನವರ್ ಟಿಪ್ಪು ಜಯಂತಿ ಕುರಿತು ಪ್ರಸ್ತಾಪಿಸಲಿದ್ದಾರೆ.

ವಿಧಾನಸಭೆಯ ಇಂದಿನ ಕಾರ್ಯಕ್ರಮ ಪಟ್ಟಿಯಲ್ಲಿ ವಿಷಯ ಸೇರ್ಪಡೆಯಾಗಿದೆ. ಗಮನ ಸೆಳೆಯುವ ಸೂಚನೆ ಪಟ್ಟಿಯಲ್ಲಿ ಈ ವಿಷಯ ಸೇರ್ಪಡೆಯಾಗಿದ್ದು, ಟಿಪ್ಪು ಜಯಂತಿ ಪುನಾರಂಭದ ಬಗ್ಗೆ ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular