BIG NEWS : ಸೆ.1 ಕ್ಕೆ ಬಿಜೆಪಿಯಿಂದ ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ ನಿಗದಿ : ಬಿ.ವೈ ವಿಜಯೇಂದ್ರ

ಬೆಂಗಳೂರು : ಧರ್ಮಸ್ಥಳ ಗ್ರಾಮದ ಸಂಪೂರ್ಣ ಪ್ರಕರಣವನ್ನು NIA ಗೆ ವಹಿಸುವಂತೆ ಸೆ.1 ಕ್ಕೆ ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ

ಸೆಪ್ಟೆಂಬರ್ 1 ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆಪ್ಟೆಂಬರ್ 1 ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಿದ್ದೇವೆ. ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಬೇಕು. ಸಿದ್ದರಾಮಯ್ಯಗೆ ದೇವರ ಬಗ್ಗೆ ಎಷ್ಟು ಭಕ್ತಿ ಇದೆಯೋ ಗೊತ್ತಿಲ್ಲ. ಧರ್ಮಸ್ಥಳ ಬರೀ ದೇವಾಲಯ ಅಲ್ಲ, ಅದೊಂದು ಪುಣ್ಯ ಕ್ಷೇತ್ರ. ಅಣ್ಣಪ್ಪ ಸ್ವಾಮಿಗೆ ಕೋಟ್ಯಾಂತರ ರೂ ಭಕ್ತರು ಇದ್ದಾರೆ. ಸಿಎಂ ಸಿದ್ದರಾಮಯ್ಯ ಯಾರ ಮಾತು ಕೇಳಿ ಆತುರ ಬಿದ್ದರೋ ಗೊತ್ತಿಲ್ಲ, ಎಲ್ಲವೂ ಹೊರಗೆ ಬರಬೇಕು ಎಂದರು.ಸೆಪ್ಟೆಂಬರ್ 1 ರಂದು ಧರ್ಮಸ್ಥಳ ಚಲೋ ನಡೆಯಲಿದೆ, ಬೃಹತ್ ಸಮಾವೇಶ ಕೂಡ ನಡೆಸಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಹೇಳಿದರು.

ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಬುರುಡೆ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 1 ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಮಧ್ಯಾಹ್ನ 2 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ಬನ್ನಿ, ಧರ್ಮವನ್ನು ನಾವು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂಬ ಧ್ಯೇಯದೊಂದಿಗೆ ಧರ್ಮರಕ್ಷಣೆಯ ಪಣ ತೊಡೋಣ, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ ಎಂದು ಬಿಜೆಪಿ ಮನವಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read