ವಾಷಿಂಗ್ಟನ್: ಏಷ್ಯಾದ ಮೂರು ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನೀಡಲಿದ್ದಾರೆ. ಮಲೇಷ್ಯಾ, ದಕ್ಷಿಣ ಕೊರಿಯಾ, ಜಪಾನ್ ಗೆ ಮುಂದಿನ ವಾರ ಡೊನಾಲ್ಡ್ ಟ್ರಂಪ್ ಭೇಟಿ ನೀಡಲಿದ್ದಾರೆ.
ತಮ್ಮ ಪ್ರವಾಸದ ಬಗ್ಗೆ ಮಾಹಿತಿ ನೀಡಿರುವ ಟ್ರಂಪ್, ಮುಂದಿನ ವಾರ ಏಷ್ಯಾದ ಮೂರು ದೇಶಗಳಿಗೆ ಭೇಟಿ ನೀಡಲಿದ್ದೇನೆ. ದಕ್ಷಿಣ ಕೊರಿಯಾ, ಜಪಾನ್, ಮಲೇಷ್ಯಾ ಗೆ ಪ್ರಯಾಣಿಸಲಿದ್ದೇನೆ. ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿಯಾಗುತ್ತೇನೆ. ಭೇಟಿಯ ವೇಳೆ ನಾವು ಅನೇಕ ವಿಷಯಗಳನ್ನು ಚರ್ಚೆ ಮಾಡುತ್ತೇವೆ ಎಂದು ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ.