HomeEntertainmentBIG NEWS : ಜ.20 ರಂದು ‘ದುನಿಯಾ ವಿಜಯ್’ ಹುಟ್ಟುಹಬ್ಬ : ಅಭಿಮಾನಿಗಳಿಗೆ ವಿಶೇಷ ಮನವಿ...

BIG NEWS : ಜ.20 ರಂದು ‘ದುನಿಯಾ ವಿಜಯ್’ ಹುಟ್ಟುಹಬ್ಬ : ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ.!

ಬೆಂಗಳೂರು : ಜ.20 ರಂದು ಸೋಮವಾರ ‘ದುನಿಯಾ ವಿಜಯ್’ ಹುಟ್ಟುಹಬ್ಬ…ಈ ಹಿನ್ನೆಲೆ ಅಭಿಮಾನಿಗಳಿಗೆ ನಟ ದುನಿಯಾ ವಿಜಯ್ ವಿಶೇಷ ಮನವಿ ಮಾಡಿದ್ದಾರೆ.

ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ನಟ ದುನಿಯಾ ವಿಜಯ್ ‘ ನನ್ನ ಪ್ರೀತಿಯ ಅಭಿಮಾನಿಗಳೇ….ಪ್ರತಿ ವರ್ಷವೂ ನನ್ನ ಹುಟ್ಟು ಹಬ್ಬವನ್ನು ನಿಮ್ಮ ಮನೆಯ , ಊರಿನ ಹಬ್ಬವನ್ನಾಗಿ ನೀವುಗಳು ಅಂದರೆ ನನ್ನ ಅಭಿಮಾನಿಗಳು ಆಚರಣೆ ಮಾಡ್ತಾ ಇದ್ರಿ. ಈ ಬಾರಿಯೂ ನಿಮ್ಮ ಜತೆ ನಾನು ಹುಟ್ಟು ಹಬ್ಬವನ್ನು ಆಚರಿಸಬೇಕು ಎಂಬ ಆಸೆ ಇತ್ತು ಆದರೆ ಕೆಲಸ ಎಂಬ ಜವಬ್ದಾರಿ ನನ್ನ ಬೆನ್ನೆರಿದೆ. ತಾವೆಲ್ಲರೂ ನಾನು ಮಾಡುವ ಕೆಲಸಕ್ಕೆ ನನ್ನ ಜತೆ ನಿಂತು ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದೀರ. ಪ್ರತಿ ಬಾರಿಯಂತೆ ಈ ಬಾರಿ ನಾನು ಹುಟ್ಟುಹಬ್ಬದ ದಿನ ನನ್ನ ತಾಯಿ, ತಂದೆ ಸಮಾಧಿ ಬಳಿ ಸಿಗುವುದಿಲ್ಲ.ಅಂದು ಜಡೇಶ್ ಕೆ ಹಂಪಿ ನಿರ್ದೇಶನ ಮಾಡುತ್ತಿರುವ VK29 ಚಿತ್ರೀಕರಣದಲ್ಲಿರುತ್ತೇನೆ. ನಿಮ್ಮ ಪ್ರೀತಿ ಅಭಿಮಾನದ ನಿರೀಕ್ಷೆಯಂತೆ ಅಂದೇ VK 29 ಚಿತ್ರದ ಫಸ್ಟ್ ಲುಕ್ ನಿಮಗಾಗಿ ಬಿಡುಗಡೆ ಮಾಡ್ತಿದ್ದೇವೆ”.

ವಿಶೇಷ ಮನವಿ: ಶನಿವಾರ ಭಾನುವಾರ ನಾನೂ ಊರಲ್ಲಿ ಇರುವುದಿಲ್ಲ.. ದಯವಿಟ್ಟು ಯಾರೂ ಕೂಡ ಮನೆ ಬಳಿ ಬಂದು ಕಾಯಬೇಡಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular