HomeKarnatakaBIG NEWS : ಪಠ್ಯ ಪುಸ್ತಕಗಳಿಗೆ ಬೇಡಿಕೆ ಸಲ್ಲಿಸುವ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ...

BIG NEWS : ಪಠ್ಯ ಪುಸ್ತಕಗಳಿಗೆ ಬೇಡಿಕೆ ಸಲ್ಲಿಸುವ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ.!

ಬೆಂಗಳೂರು : ಪಠ್ಯ ಪುಸ್ತಕಗಳಿಗೆ ಬೇಡಿಕೆ ಸಲ್ಲಿಸುವ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.

2025-26 ನೇ ಶೈಕ್ಷಣಿಕ ಸಾಲಿಗೆ ಪಠ್ಯಪುಸ್ತಕಗಳನ್ನು ಶಾಲೆಗಳಿಗೆ ರವಾನಿಸುವ ಸಂಬಂಧ ಬೇಡಿಕೆ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಚಾಲ್ತಿಯಲ್ಲಿದೆ. ಶಾಲೆಗಳ ಮುಖ್ಯಶಿಕ್ಷಕರು ಬೇಡಿಕೆ ಸಲ್ಲಿಸುವ ಸಂದರ್ಭದಲ್ಲಿ ಶಾಲೆಗೆ ಅಗತ್ಯವಿರುವ ಪಠ್ಯಪುಸ್ತಕಗಳನ್ನು ಮಾತ್ರವೇ ಸರಿಯಾದ ಸಂಖ್ಯೆಯಲ್ಲಿ ಬೇಡಿಕೆ ಸಲ್ಲಿಸಲು ತಿಳಿಸಲಾಗಿದ್ದು, ಈ ಸಂಬಂಧ ಅಡಕಗೊಳಿಸಿರುವ ಅನುಬಂಧ-1 ರಿಂದ 4 ಅನ್ನು ಅಧ್ಯಯನ ಮಾಡಿಕೊಂಡು ಶಾಲೆಗಳಿಗೆ ಅಗತ್ಯವಿರುವ ಶೀರ್ಷಿಕೆಗಳನ್ನು ಮಾತ್ರವೇ ಬೇಡಿಕೆ ಸಲ್ಲಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 2025-26 ನೇ ಸಾಲಿಗೆ ಸರಿಯಾದ ಶೀರ್ಷಿಕೆಗಳನ್ನು ಕೊಟ್ಟು ಬೇಡಿಕೆ ಸಲ್ಲಿಸುವಂತೆ ಸೂಚನೆ ನೀಡಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular