ನವದೆಹಲಿ: 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ .ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
13 ರಾಜ್ಯಗಳ 50 ರಾಜ್ಯಸಭಾ ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿದ್ದು, ಎರಡು ರಾಜ್ಯಗಳ ಉಳಿದ ಆರು ಸದಸ್ಯರು ಏಪ್ರಿಲ್ 3 ರಂದು ನಿವೃತ್ತರಾಗಲಿದ್ದಾರೆ. ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಆರು ವರ್ಷಗಳಾಗಿವೆ. ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದ ತಲಾ 5, ಗುಜರಾತ್ ಮತ್ತು ಕರ್ನಾಟಕದ ತಲಾ 4, ಒಡಿಶಾ, ಆಂಧ್ರ ಪ್ರದೇಶ ಮತ್ತು ರಾಜಸ್ಥಾನದ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಫೆಬ್ರವರಿ 8ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಫೆ. 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿತ್ತು, ಫೆ. 16ರಂದು ನಾಮಪತ್ರಗಳ ಪರಿಶೀಲನೆ ನಡೆದಿದೆ. ಫೆ. 27 ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅಂದೇ ಸಂಜೆ 5ಗಂಟೆಗೆ ಮತ ಎಣಿಕೆ ನಡೆಯಲಿದೆ.ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಅಶ್ವಿನ್ ವೈಷ್ಣವ, ಭೂಪೆಂದ್ರ ಯಾದವ್, ಮಂಶುಕ್ ಮಾಂಡವಿಯ ಅವರ ಅವಧಿ ಮುಕ್ತಾಯವಾಗಲಿದೆ. ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಅವರೂ ಪಡೆಯುತ್ತಿದ್ದಾರೆ,
https://twitter.com/poll_diary/status/1751887973459849674?ref_src=twsrc%5Etfw%7Ctwcamp%5Etweetembed%7Ctwterm%5E1751887973459849674%7Ctwgr%5E6e75a1f6f6c2e5414d442ebbc9032fc86a03dba0%7Ctwcon%5Es1_&ref_url=https%3A%2F%2Fkannadadunia.com%2Flive-news%2Fbreaking-feb-election-announcement-for-56-rajya-sabha-seats-in-15-states-on-27th%2F