HomeLatest NewsBIG NEWS: ನಗರಸಭೆ, ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ: ಸದನದಲ್ಲಿ ಸಚಿವ ರಹೀಂ...

BIG NEWS: ನಗರಸಭೆ, ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ: ಸದನದಲ್ಲಿ ಸಚಿವ ರಹೀಂ ಖಾನ್ ಮಾಹಿತಿ

ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸೇರಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದರೂ ಚುನಾವಣೆ ನಡೆದಿಲ್ಲ. ಕೂಡಲೇ ಚುನಾವಣೆ ನಡೆಸಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಬಿಎ ಚುನಾವಣೆ ನಡೆಸಬೇಕಿದೆ, ಚುನಾವಣಾ ಆಯೋಗ ನ್ಯಾಯಾಲಯಕ್ಕೆ ಹೋಗಿದೆ, ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಮಯಕ್ಕೆ ತಕ್ಕಂತೆ ನಡೆಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪ್ರತಾಪ್ ಸಿಂಹ ನಾಯಕ್ ಆಗ್ರಹಿಸಿದ್ದಾರೆ.

 ಇದಕ್ಕೆ ಉತ್ತರ ನೀಡಿದ ಸಚಿವ ರಹೀಂ ಖಾನ್, 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಿದ್ದು, ಈಗಾಗಲೇ ಮೀಸಲಾತಿ, ಡಿ ಲಿಮಿಟೇಶನ್ ಕಾರ್ಯ ನಡೆಯುತ್ತಿದೆ. ಕೆಲವು ಸ್ಥಳೀಯ ಸಂಸ್ಥೆಗಳು ಅಪ್ಡೇಟ್ ಆಗಿದೆ. ಹೀಗಾಗಿ ಚುನಾವಣೆ ವಿಳಂಬವಾಗಿದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿದೆ. ಆದಷ್ಟು ಶೀಘ್ರವೇ ಚುನಾವಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆ ಸಚಿವರು ಬಿಜೆಪಿಯಿಂದ ವಿಳಂಬವಾಗಿದೆ ಎಂದು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular