BIG NEWS: ರಾಜ್ಯದ 100 ಉರ್ದು ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ

ಬೆಂಗಳೂರು: ರಾಜ್ಯದಲ್ಲಿನ 100 ಉರ್ದು ಶಾಲೆಗಳಲ್ಲಿ 2026 -27ನೇ ಸಾಲಿನಿಂದ ಇಂಗ್ಲೀಷ್ ಮಾಧ್ಯಮ ಆರಂಭಿಸಲಾಗುವುದು.

ಪೋಷಕರ ಬೇಡಿಕೆಯ ಅನ್ವಯ ಉರ್ದು ಮಾಧ್ಯಮ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಆರಂಭಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕಾಗಿ 100 ಕೋಟಿ ರೂಪಾಯಿ ನೆರವು ಪಡೆಯಲು ಮುಂದಾಗಿದೆ. ಎಲ್ಲಾ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ 12ನೇ ತರಗತಿಯವರೆಗೆ ದ್ವಿಭಾಷಾ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಉರ್ದು ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದೆ. ಪ್ರಸ್ತುತ ಇರುವ ನಾಲ್ಕು ಸಾವಿರಕ್ಕೂ ಅಧಿಕ ಉರ್ದು ಶಾಲೆಗಳಲ್ಲಿ ಶೇಕಡ 25ಕ್ಕೂ ಹೆಚ್ಚು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹತ್ತಕ್ಕಿಂತ ಕಡಿಮೆ ಇದೆ. ಹೀಗಾಗಿ 100 ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮನವಿ ಮಾಡಿದೆ. ಈಗಾಗಲೇ ರಾಜ್ಯದಲ್ಲಿ 400 ಉರ್ದು ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಅವಕಾಶ ನೀಡಿದ್ದು, ಮತ್ತೆ 100 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read