HomeLive NewsBIG NEWS : ರಾಜ್ಯದಲ್ಲಿ ನೂತನ ‘ಸೈಬರ್ ಕಮಾಂಡ್’ ಘಟಕ ಸ್ಥಾಪನೆ : ಸರ್ಕಾರದಿಂದ ಮಹತ್ವದ...

BIG NEWS : ರಾಜ್ಯದಲ್ಲಿ ನೂತನ ‘ಸೈಬರ್ ಕಮಾಂಡ್’ ಘಟಕ ಸ್ಥಾಪನೆ : ಸರ್ಕಾರದಿಂದ ಮಹತ್ವದ ಆದೇಶ |Cyber Command Unit

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ಸೈಬರ್ ಕಮಾಂಡ್ ಘಟಕವನ್ನು (Cyber Command Unit) ಸ್ಥಾಪಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಪತ್ರಗಳಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ವಿಜ್ಞಾನ ಹಾಗೂ ತಂತ್ರಜ್ಞಾನದ ಬಳಕೆಯು ಮಾನವನ ಜೀವನ ಶೈಲಿಯನ್ನು ಅತ್ಯಂತ ಸರಳೀಕರಣಗೊಳಿಸಿದ್ದು, ದೈನಂದಿನ ಜೀವನದಲ್ಲಿ ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದಾಗಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು, ಹಳೆಯ ವೃತ್ತಿಪರ ಅಪರಾಧಗಳಾದ ಡಕಾಯಿತಿ, ರಾಬರಿ ಹಾಗೂ ಇತರೆ ಭೌತಿಕ ಕಳ್ಳತನಗಳನ್ನು ಹಿಂದಿಕ್ಕಿ ಅತಿ ಹೆಚ್ಚು ಸೈಬರ್ ಅಪರಾಧಗಳು ವರದಿಯಾಗುತ್ತಿದ್ದು ಮಹಾನಗರಗಳಲ್ಲಿ ದಾಖಲಾಗುವ ಅಪರಾಧ ಪ್ರಕರಣಗಳಲ್ಲಿ ಶೇ.20ರಷ್ಟು ಸೈಬರ್ ಪ್ರಕರಣಗಳಾಗಿದ್ದು, ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಒಟ್ಟಾರೆಯಾಗಿ 52,000 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿದ್ದು ಕರ್ನಾಟಕ ರಾಜ್ಯವು ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ದಾಖಲಾಗುವ ಸೈಬರ್ ಅಪರಾಧಗಳ ಸಂಖ್ಯೆಯಲ್ಲಿ ಮಂಚೂಣಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ರಾಜ್ಯದಲ್ಲಿ ಪ್ರತ್ಯೇಕ ಸೈಬರ್ ಅಪರಾಧ ತಡೆ ಘಟಕ (Cyber Crimes Prevention Unit) ಅನ್ನು ಸೃಜಿಸುವ ಅವಶ್ಯಕತೆ ಕಂಡುಬರುತ್ತದೆಂದು ತಿಳಿಸಿರುತ್ತಾರೆ.

ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 43 ಸಿ.ಇ.ಎನ್ (ಸೈಬರ್, ಎಕನಾಮಿಕ್ಸ್ & ನಾರ್ಕೋಟಿಕ್ಸ್) ಪೊಲೀಸ್ ಠಾಣೆಗಳನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಗಳೆಂದು ಮರುಪದನಾಮೀಕರಿಸಿ ಹಾಗೂ ಪ್ರಸ್ತುತ ಡಿಜಿಪಿ, ಸಿ.ಐ.ಡಿ ರವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಟ್ಟದ ವ್ಯಾಪ್ತಿಯನ್ನು ಹೊಂದಿರುವ ಸೈಬರ್ ಅಪರಾಧ ಪೊಲೀಸ್ ಠಾಣೆ ಹಾಗೂ ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಬೆಂಗಳೂರು ನಗರ ವ್ಯಾಪ್ತಿಯನ್ನು ಒಳಗೊಂಡಿರುವ ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಒಟ್ಟಾರೆ 45 ಪೊಲೀಸ್ ಠಾಣೆಗಳನ್ನು ಪ್ರಸ್ತಾಪಿತ ಸೈಬರ್ ಅಪರಾಧ ತಡೆ ಘಟಕದ (Cyber Crimes Prevention Unit) ಅಧೀನಕ್ಕೆ ಒಳಪಡಿಸುವಂತೆ ಕೋರಿರುತ್ತಾರೆ.ಸಿ.ಇ.ಎನ್ ಪೊಲೀಸ್ ಠಾಣೆಗಳಲ್ಲಿ ಕೆಳಕಂಡ ನಿಯಮ/ಅಧಿನಿಯಮಗಳಡಿಯಲ್ಲಿ ಪ್ರಕರಣ ದಾಖಲಿಸಿ ಅಗತ್ಯ ಕ್ರಮ ವಹಿಸಲು ಸರ್ಕಾರದ ಅಧಿಸೂಚನೆಗಳನ್ವಯ ಅಧಿಕಾರ ನೀಡಲಾಗಿದೆ ಎಂದು ತಿಳಿಸಿರುತ್ತಾರೆ:-

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. The Karnataka State Excise Act, 1965 (Karnataka Act, 21 of 1966).
  2. The Lotteries Act, 1964 and the Karnataka State Lottery Rules, 1999.
  3. The Unlawful Activities Prevention Act, 1967 (Central Act, 37 of 1967).
  4. The Karnataka Control of Organized Crime Act, 2000 (Karnataka Act, 1 of 2002).
  5. The Information Technology Act, 2000 along with conspiracies and abetment to commit the same.
  6. IPC offences of 420, 409, 467, 468, 471, 489 (A-E) wherein amount involved Rs.50 lakhs and above.
  7. The Protection of Interest of Depositors in Financial Institution Act, 1999 to the tune of Rs.1.00 Crore and above.
  8. Cases under Banning of unregulated Deposits Scheme Act, 2019 (Central Act, 21 of 2019).
  9. All cases relating to human trafficking offences under Section 370 IPC

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular