BIG NEWS: ಮತದಾನಕ್ಕೂ ಮುನ್ನವೇ ಕೆ.ಎಸ್. ಈಶ್ವರಪ್ಪರಿಂದ ಮತ್ತೊಂದು ಮಹತ್ವದ ಘೋಷಣೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಪುತ್ರ ಕಾಂತೇಶ್ ಅವರಿಗೆ ನೀಡದಿರುವ ಕಾರಣಕ್ಕೆ ಬಿಜೆಪಿ ವಿರುದ್ಧ ಸಿಡಿದೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪನವರಿಗೆ ಬುದ್ಧಿ ಕಲಿಸಲು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ಎಸ್.ವೈ. ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧ ಕಣಕ್ಕಿಳಿದಿದ್ದಾರೆ.

ಕೇಂದ್ರ ಬಿಜೆಪಿ ನಾಯಕರ ಮನವೊಲಿಕೆಗೂ ಮಣಿಯದ ಈಶ್ವರಪ್ಪ, ತಾವು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ವಿಜಯ ಸಾಧಿಸುವ ಮೂಲಕ ಯಡಿಯೂರಪ್ಪನವರ ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಹಾಡುತ್ತೇನೆ. ಜೊತೆಗೆ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ ಎಂದು ಹೇಳಿದ್ದಾರೆ. ಇದರ ಮಧ್ಯೆ ಈಶ್ವರಪ್ಪ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ.

ಈ ಹಿಂದೆ ರಾಯಣ್ಣ ಬ್ರಿಗೇಡ್ ಸ್ಥಾಪಿಸಿ ಬಳಿಕ ಕೇಂದ್ರ ನಾಯಕ ಅಮಿತ್ ಶಾ ಅವರ ಸೂಚನೆಯ ಮೇರೆಗೆ ಅದನ್ನು ವಿಸರ್ಜನೆ ಮಾಡಿದ್ದ ಈಶ್ವರಪ್ಪ, ಲೋಕಸಭಾ ಚುನಾವಣೆ ಬಳಿಕ ಹಿಂದುಳಿದವರು ಮತ್ತು ದಲಿತರನ್ನು ಒಟ್ಟುಗೂಡಿಸುವ ಸಲುವಾಗಿ ‘ಹಿಂದ’ ಸಂಘಟನೆ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಮಂಗಳವಾರದಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಯಣ್ಣ ಬ್ರಿಗೇಡ್ ಸ್ಥಾಪಿಸಿದಾಗ ನಾನು ಎಲ್ಲಿ ಮುಖ್ಯಮಂತ್ರಿ ಆಗುತ್ತೇನೋ ಎಂಬ ಭಯದಿಂದ ಯಡಿಯೂರಪ್ಪನವರು ಅಮಿತ್ ಶಾ ಅವರಿಗೆ ತಪ್ಪು ಮಾಹಿತಿ ನೀಡಿ ಅದನ್ನು ವಿಸರ್ಜನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ನಾನು ಕೂಡ ರಾಯಣ್ಣ ಬ್ರಿಗೇಡ್ ವಿಸರ್ಜನೆ ಮಾಡಲು ಒಪ್ಪಬಾರದಿತ್ತು ಎಂದು ಹೇಳಿದ ಅವರು, ಲೋಕಸಭಾ ಚುನಾವಣೆ ಬಳಿಕ ‘ಹಿಂದ’ ಸಂಘಟನೆ ಸ್ಥಾಪಿಸುವುದು ನಿಶ್ಚಿತ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read