HomeLatest NewsBIG NEWS: ರಾಜ್ಯದ ಜಾತಿ ಪಟ್ಟಿಯಲ್ಲಿ, ಕ್ರೈಸ್ತ ಧರ್ಮದಲ್ಲೂ ಇಲ್ಲದ ಹೊಸ ಜಾತಿ ಸೇರ್ಪಡೆಗೆ ರಾಜ್ಯಪಾಲರಿಂದಲೂ...

BIG NEWS: ರಾಜ್ಯದ ಜಾತಿ ಪಟ್ಟಿಯಲ್ಲಿ, ಕ್ರೈಸ್ತ ಧರ್ಮದಲ್ಲೂ ಇಲ್ಲದ ಹೊಸ ಜಾತಿ ಸೇರ್ಪಡೆಗೆ ರಾಜ್ಯಪಾಲರಿಂದಲೂ ಆಕ್ಷೇಪ

ಬೆಂಗಳೂರು: ನಿಗದಿಯಂತೆ ಸೆ. 22 ರಿಂದ ಅ. 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿ ನಡೆಯಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಸಮೀಕ್ಷೆಯಲ್ಲಿ ರಾಜ್ಯದ ಜಾತಿ ಪಟ್ಟಿಯಲ್ಲಿ ಇಲ್ಲದ ಮತ್ತು ಕ್ರೈಸ್ತ ಧರ್ಮದಲ್ಲಿ ಇಲ್ಲದ ಜಾತಿಗಳನ್ನು ಸೇರ್ಪಡೆ ಮಾಡಿರುವುದಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಆಕ್ಷೇಪಿಸಿದ್ದಾರೆ.

ಸೆ. 16ರಂದು ಬಿಜೆಪಿ ಸಂಸದರು ಮತ್ತು ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ಮನವಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಕುಂಬಾರ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಹೀಗೆ ಹೊಸ ಜಾತಿಗಳನ್ನು ಉಲ್ಲೇಖಿಸಿ ಕ್ರೈಸ್ತ ಧರ್ಮದಲ್ಲಿ ಜಾತಿ ಮಾನ್ಯತೆ ನೀಡುವ ಈ ಕ್ರಮವೂ ಸಾಮಾಜಿಕ ಅಶಾಂತಿಯ ಜೊತೆಗೆ ದೀರ್ಘಾವಧಿಯಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಅಪಾಯ ತರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯಲ್ಲಿ ರಾಜ್ಯದ ಜಾತಿ ಪಟ್ಟಿ ಇಲ್ಲದ ಮತ್ತು ಕ್ರೈಸ್ತ ಧರ್ಮದಲ್ಲಿ ಇಲ್ಲದ ಜಾತಿಗಳನ್ನು ಸೇರ್ಪಡೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular